Follow Us On

WhatsApp Group
Important
Trending

ರವಿ ದೇಶಭಂಡಾರಿ ಮುಖ್ಯಮಂತ್ರಿ ಪದಕಕ್ಕೆ ಆಯ್ಕೆ

ಕುಮಟಾ: ರಾಜ್ಯ ಪೋಲಿಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಾಲೂಕಿನ ಸಂತೇಗುಳಿಯ ರವಿ ಗುರುನಾಥ್ ದೇಶಭಂಡಾರಿ ಕರ್ನಾಟಕ ರಾಜ್ಯ ಪೊಲೀಸ್ ದ್ವಜ ದಿನಾಚರಣೆಯಂದು ನೀಡಲಾಗುವ ಮುಖ್ಯಮಂತ್ರಿ ಪದಕ ಪ್ರಶಸ್ತಿ ಗೆ ಆಯ್ಕೆಯಾಗಿದ್ದಾರೆ. ರವಿ ದೇಶಭಂಡಾರಿ ಅವರು ತಾಲೂಕಿನ ಸಂತೇಗುಳಿಯವರು. ಇವರು 2013 ರಲ್ಲಿ ಪೋಲಿಸ್ ಇಲಾಖೆಯಲ್ಲಿ ಕಾನಸ್ಟೆಬಲ್ ಹುದ್ದೆಗೆ ನೇಮಕಗೊಂಡು ಬೆಂಗಳೂರಿನಲ್ಲಿ ಕಳೆದ 8 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

2019 ನೇ ಸಾಲಿನಲ್ಲಿ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದ ಅಖಿಲ ಭಾರತ ಪೊಲೀಸ್ ಕರ್ತವ್ಯ ಕೂಟದಲ್ಲಿ ಕರ್ನಾಟಕದ ಪರವಾಗಿ ಭಾಗವಹಿಸಿದ್ದು, ಅಣಕು ಅಪರಾಧ ಪತ್ತೆ ಕಾರ್ಯಚರಣೆಯಲ್ಲಿ ಪ್ರಥಮ ಸ್ಥಾನದೊಂದಿಗೆ ಚಿನ್ನದ ಪದಕ ಪಡೆದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಹಿರಿಮೆಯನ್ನು ರಾಷ್ಟ್ರ ಮಟ್ಟದಲ್ಲಿ ಹೆಚ್ಚಿಸಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಪ್ರಿಲ್ 2 ರಂದು ನಡೆಯುವ ಪೋಲಿಸ್ ಧ್ವಜ ದಿನಾಚರಣೆಯಂದು ಮುಖ್ಯಮಂತ್ರಿ ಪದಕ ನೀಡಿ ಗೌರವಿಸಲಿದೆ. ಕರ್ನಾಟಕ ರಾಜ್ಯ ಅಪರಾಧ ಮತ್ತು ತಾಂತ್ರಿಕ ವಿಭಾಗದ ಅಧೀನ ಘಟಕವಾದ ಕರ್ನಾಟಕ ರಾಜ್ಯ ಪೊಲೀಸ್ ಶ್ವಾನದಳ ಬೆಂಗಳೂರಿನಲ್ಲಿ “ದ್ರೋಣ” ಎಂಬ ಶ್ವಾನದ ಹ್ಯಾಂಡ್ಲರ್ ಆಗಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button