Follow Us On

Google News
Important
Trending

ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಮಂಗನ ದಾಳಿ: ರಕ್ತನಾಳಕ್ಕೆ ಹಾನಿ

ಭಟ್ಕಳ : ಇತ್ತಿಚೆಗೆ ಮಂಗಗಳ ಹಾವಳಿ ಹೆಚ್ಚುತ್ತಿದ್ದು, ಮನುಷ್ಯರ ಮೇಲೂ ದಾಳಿ ನಡೆಸುತ್ತಿರುವ ಪ್ರಕರಣ ವರದಿಯಾಗುತ್ತಿದೆ. ಹೌದು, ನಡೆದುಕೊಂಡು ಹೋಗುಟ್ಟಿದ್ದ ಮಹಿಳೆಯ ಮೇಲೆ ಮಂಗ ದಾಳಿ ನಡೆಸಿ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲೂಕಿನಲ್ಲಿ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಮಂಗವೊoದು ಬಂದು ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಸರೋಜಿನಿ ಶೇಟ್ ಎಂಬ ಮಹಿಳೆಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪಟ್ಟಣದ ವಿ.ಟಿ.ರೋಡ ವಿವಾಸಿಯಾಗಿರುವ ಇವರು ಮನೆಯ ಪಕ್ಕದ ಜಂಬೂರಮಠದ ಬಳಿ ನಡೆದುಕೊಂಡು ಹೋಗುತ್ತಿದ್ದರು. ಏಕಾಏಕಿ ಮಂಗ ದಾಳಿ ನಡೆಸಿದೆ. ಪರಿಣಾಮ ಮಹಿಳೆಯ ರಕ್ತನಾಳಕ್ಕೆ ಹಾನಿಯಾಗಿದ್ದು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಭಟ್ಕಳ ಪಟ್ಟಣದ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಮಂಗಗಳ ಹಾವಳಿ ಹೆಚ್ಚುತ್ತಿದ್ದು ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.

ವಿಸ್ಮಯ ನ್ಯೂಸ್, ಭಟ್ಕಳ

Back to top button