Follow Us On

WhatsApp Group
Uttara Kannada
Trending

ಭಟ್ಕಳ ಗ್ರಾಮ ಪಂಚಾಯತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ವರ್ಗವಾರು ಮೀಸಲಾತಿ ಘೋಷಣೆ

16 ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟ
ಪಾರದರ್ಶಕವಾಗಿ ನಡೆದ ಆಯ್ಕೆ ಪ್ರಕ್ರಿಯೆ

ಭಟ್ಕಳ: ತಾಲ್ಲೂಕಿನ 16 ಗ್ರಾಮ ಪಂಚಾಯತಿವಾರು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕಾಗಿ ಮೀಸಲಾತಿ ಘೋಷಣೆಯನ್ನು ಜಿಲ್ಲಾಧಿಕಾರಿ ಡಾ. ಕೆ.ಹರೀಶ ಕುಮಾರ ನೇತ್ರತ್ವದಲ್ಲಿ ಇಲ್ಲಿನ ನ್ಯೂ ಇಂಗ್ಲೀಷ್ ಸ್ಕೂಲ್ ಕಮಲಾವತಿ ಸಭಾಭವನದಲ್ಲಿ ಶುಕ್ರವಾರದಂದು ನಡೆಸಲಾಯಿತು.

16 ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿಯನ್ನು ಜಿಲ್ಲಾಧಿಕಾರಿ ಡಾ.ಕೆ. ಹರೀಶ ಕುಮಾರ, ಗ್ರಾಮ ಪಂಚಾಯತಿಗೆ ಆಯ್ಕೆಯಾದ ಸದಸ್ಯರ ಸಮಕ್ಷಮದಲ್ಲಿ ಚುನಾವಣಾ ಆಯೋಗ ನಿರ್ದೇಶಿಸಿದ ಸಾಪ್ಟವೇರನ್ನು ಬಳಸಿ ಪಾರದರ್ಶಕವಾಗಿ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.

ಕೆಲವು ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗ್ರಾಮ ಪಂಚಾಯತಿ ಸದಸ್ಯರ ಎದುರಲ್ಲಿ ಅವರಿಂದಲೇ ಲಾಟರಿ ಎತ್ತುವ ಮೂಲಕ‌ ಮೀಸಲಾತಿ ಆಯ್ಕೆ ಮಾಡಲಾಯಿತು. ನಿಗದಿಯಂತೆ 16 ಗ್ರಾಮ ಪಂಚಾಯತಗಳಲ್ಲಿ ಮಾವಳ್ಳಿ-2 ಗ್ರಾಮ ಪಂಚಾಯತದ ಹಿಂದುಳಿದ ‘ಅ’ ವರ್ಗಕ್ಕೆ ಅಧ್ಯಕ್ಷ ಸ್ಥಾನ, ಅನೂಸೂಚಿತ ಜಾತಿ ಮಹಿಳೆ ಉಪಾಧ್ಯಕ್ಷ ಸ್ಥಾನ, ಕೊಪ್ಪ ಗ್ರಾಮ ಪಂಚಾಯತದ ಹಿಂದುಳಿದ ‘ಅ’ ವರ್ಗಕ್ಕೆ ಅಧ್ಯಕ್ಷ ಸ್ಥಾನ, ಅನುಸೂಚಿತ ಪಂಗಡ ಮಹಿಳೆಗೆ ಉಪಾಧ್ಯಕ್ಷ ಸ್ಥಾನ, ಕಾಯ್ಕಿಣಿ ಗ್ರಾಮ ಪಂಚಾಯತದ ಹಿಂದುಳಿದ ಅ ವರ್ಗದ ಮಹಿಳೆಗೆ ಅಧ್ಯಕ್ಷ ಸ್ಥಾನ, ಸಾಮಾನ್ಯ ವರ್ಗ ಉಪಾಧ್ಯಕ್ಷ ಸ್ಥಾನ, ಬೆಂಗ್ರೆ ಗ್ರಾಮ ಪಂಚಾಯತದ ಹಿಂದುಳಿದ ಅ ವರ್ಗದ ಮಹಿಳೆಗೆ ಅಧ್ಯಕ್ಷ ಸ್ಥಾನ, ಹಿಂದುಳಿದ ಬ ವರ್ಗ ಮಹಿಳೆಗೆ ಉಪಾಧ್ಯಕ್ಷ ಸ್ಥಾನ, ಘೋಷಣೆ ಮಾಡಲಾಯಿತು.

ಬೈಲೂರು ಗ್ರಾಮ ಪಂಚಾಯತದ ಹಿಂದುಳಿದ ಬ ವರ್ಗದ ಮಹಿಳೆಗೆ ಅಧ್ಯಕ್ಷ ಸ್ಥಾನ, ಹಿಂದುಳಿದ ಅ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನ, ಮುಂಡಳ್ಳಿ ಗ್ರಾಮ ಪಂಚಾಯತದ ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಸ್ಥಾನ, ಸಾಮಾನ್ಯ ಮಹಿಳೆಗೆ ಉಪಾಧ್ಯಕ್ಷ ಸ್ಥಾನ, ಯಲ್ವಡಿಕವೂರ ಗ್ರಾಮ ಪಂಚಾಯತದ ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಸ್ಥಾನ, ಸಾಮಾನ್ಯ ಮಹಿಳೆಗೆ ಉಪಾಧ್ಯಕ್ಷ ಸ್ಥಾನ, ಮುಟ್ಟಳ್ಳಿ ಗ್ರಾಮ ಪಂಚಾಯತದ ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಸ್ಥಾನ, ಹಿಂದುಳಿದ ಅ ವರ್ಗದ ಮಹಿಳೆಗೆ ಉಪಾಧ್ಯಕ್ಷ ಸ್ಥಾನ, ಘೋಷಣೆ ಮಾಡಲಾಯಿತು.

ಮಾರುಕೇರಿ ಗ್ರಾಮ ಪಂಚಾಯತದ ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಸ್ಥಾನ, ಸಾಮಾನ್ಯ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನ,ಕೋಣಾರ ಗ್ರಾಮ ಪಂಚಾಯತದ ಸಾಮಾನ್ಯ ವರ್ಗಕ್ಕೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನ, ಶಿರಾಲಿ ಗ್ರಾಮ ಪಂಚಾಯತದ ಸಾಮಾನ್ಯ ವರ್ಗದ ಮಹಿಳೆಗೆ ಅಧ್ಯಕ್ಷ ಸ್ಥಾನ, ಅನುಸೂಚಿತ ಜಾತಿ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನ ಘೋಷಣೆ ಮಾಡಲಾಯಿತು.

ಹೆಬಳೆ ಗ್ರಾಮ ಪಂಚಾಯತದ ಸಾಮಾನ್ಯ ವರ್ಗದ ಮಹಿಳೆಗೆ ಅಧ್ಯಕ್ಷ ಸ್ಥಾನ, ಹಿಂದುಳಿದ ಅ ವರ್ಗದ ಮಹಿಳೆಗೆ ಉಪಾಧ್ಯಕ್ಷ ಸ್ಥಾನ, ಹಾಡುವಳ್ಳಿ ಗ್ರಾಮ ಪಂಚಾಯತದ ಸಾಮಾನ್ಯ ಮಹಿಳೆಗೆ ಅಧ್ಯಕ್ಷ ಸ್ಥಾನ, ಸಾಮಾನ್ಯ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನ, ಮಾವಳ್ಳಿ -1 ಗ್ರಾಮ ಪಂಚಾಯತದ ಅನುಸೂಚಿತ ಜಾತಿ ವರ್ಗಕ್ಕೆ ಅಧ್ಯಕ್ಷ ಸ್ಥಾನ, ಸಾಮಾನ್ಯ ಮಹಿಳೆಗೆ ಉಪಾಧ್ಯಕ್ಷ ಸ್ಥಾನ, ಬೆಳಕೆ ಗ್ರಾಮ ಪಂಚಾಯತದ ಅನುಸೂಚಿತ ಜಾತಿ ಮಹಿಳೆಗೆ ಅಧ್ಯಕ್ಷ ಸ್ಥಾನ, ಹಿಂದುಳಿದ ಅ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನ, ಮಾವಿನಕುರ್ವೆ ಗ್ರಾಮ ಪಂಚಾಯದ ಅನುಸೂಚಿತ ಪಂಗಡ ಮಹಿಳೆಗೆ ಅಧ್ಯಕ್ಷ ಸ್ಥಾನ, ಸಾಮಾನ್ಯ ವರ್ಗಕ್ಕೆ ಉಪಾಧ್ಯಕ್ಷ ಸ್ಥಾನವನ್ನು ಘೋಷಣೆ ಮಾಡಲಾಯಿತು.

ಮೀಸಲಾತಿ ಆಯ್ಕೆ ಪ್ರಕ್ರಿಯೆಯನ್ನು ಅ.ಪ.ರ. ಜಿಲ್ಲಾಧಿಕಾರಿ ಕ್ರಷ್ಣಮೂರ್ತಿ ಅವರು ನಡೆಸಿಕೊಟ್ಟರು. ವೇದಿಕೆಯಲ್ಲಿ ಸಹಾಯಕ ಆಯುಕ್ತ ಭರತ್ ಎಸ್., ತಹಸೀಲ್ದಾರ ರವಿಚಂದ್ರ ಎಸ್., ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಪ್ರಭಾಕರ ಚಿಕ್ಕನಮನೆ ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

Back to top button