Follow Us On

WhatsApp Group
Focus News
Trending

ಜಿಂಕೆ ಹಿಡಿದು ಮಾಂಸ ಮಾರಾಟ: ಓರ್ವನ ಬಂಧನ: ಇಬ್ಬರು ಪರಾರಿ

ಶಿರಸಿ: ಜಿಂಕೆಯನ್ನು ಹಿಡಿದು ಅದರ ಮಾಂಸವನ್ನು ಮಾರಾಟ ಮಾಡುತ್ತಿರುವ ಸಂದರ್ಭದಲ್ಲಿ ಖಚಿತ ಮಾಹಿತಿಯಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದು, ಇನ್ನಿಬ್ಬರು ಆರೋಪಿಗಳು ಪರಾರಿಯಾದ ಘಟನೆ ಶಿರಸಿ ತಾಲೂಕಿನ ಬನವಾಸಿ ಸಮೀಪದ ಕಿರವತ್ತಿಯಲ್ಲಿ ನಡೆದಿದೆ. ಮಂಜುನಾಥ ಶಿವಪ್ಪ ಅಂಬಿಗ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಬಂಗಾರಯ್ಯ ಸಂಕಪ್ಪ ಕಿರವತ್ತಿ ಹಾಗೂ ರಮೇಶ ತುಮರಿಕೊಪ್ಪ ಎಂಬ ಇಬ್ಬರು ಆರೋಪಿಗಳು ನಾಪತ್ತೆಯಾಗಿದ್ದಾರೆ. ಇವರು ಬನವಾಸಿ ವಲಯದ ಅರಣ್ಯ ವ್ಯಾಪ್ತಿಯಲ್ಲಿ ಜಿಂಕೆಯನ್ನು ಹಿಡಿದು ಅದರ ಮಾಂಸವನ್ನು ಮಾರಾಟ ಮಾಡಲು ಹೊಂಚು ಹಾಕಿದ್ದರು.

ಈ ಸಂದರ್ಭದಲ್ಲಿ ಖಚಿತ ಮಾಹಿತಿಯ ಮೇರೆಗೆ ಬನವಾಸಿ ಆರ್.ಎಫ್.ಓ ಉಷಾ ಕಬ್ಬೇರ ಹಾಗು ಸಿಬ್ಬಂದಿಗಳು ದಾಳಿ ನಡೆಸಿ ಓರ್ವನನ್ನು ಬಂಧಿಸಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ. ಅಲ್ಲದೇ ಆರೋಪಿಗಳಿಂದ ಜಿಂಕೆಯ ಮಾಂಸ ಮತ್ತು ಕೃತ್ಯಕ್ಕೆ ಬಳಸಲಾದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಕಾರ್ಯಾಚರಣೆಯಲ್ಲಿ ಬನವಾಸಿ ಆರ್.ಎಫ್.ಓ ಉಷಾ ಕಬ್ಬೇರ, ಸಂತೋಷ ಎಡಕಿ, ಗುಡ್ಡಪ್ಪ ಪಿ. ಎಮ್. ಮಂಜುನಾಥ, ರಮೇಶ, ಅಮೃತ, ಬಸವರಾಜ ಹಾಗೂ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

” ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠ ” ಪ್ರಧಾನ ಜ್ಯೋತಿಷ್ಯರು : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9886460777

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Back to top button