ಪ್ರಧಾನ ಮಂತ್ರಿ ಆವಾಸ್ ಯೋಜನೆ ಪರಿಶೋಧನೆ – ತರಬೇತಿ ಕಾರ್ಯಾಗಾರ

ಹೊನ್ನಾವರ– ಪ್ರಧಾನ ಮಂತ್ರಿ ಗ್ರಾಮೀಣ ಆವಾಸ್ ಯೋಜನೆ ಸಮರ್ಪಕತೆ ಕುರಿತು ಸಾಮಾಜಿಕ ಪರಿಶೋಧನೆ ನಡೆಸಲು ಸಾಮಾಜಿಕ ಪರಿಶೋಧನೆ ತಂಡದ ಗ್ರಾಮ ಸಂಪನ್ಮೂಲಗಳಿಗೆ ಇಂದು ತರಬೇತಿ ಕಾರ್ಯಾಗಾರ ನಡೆಯಿತು. ಸಾಮಾಜಿಕ ಪರಿಶೋಧನೆ ನಿರ್ದೇಶನಾಲಯ ಬೆಂಗಳೂರು ಇವರ ಮಾರ್ಗದರ್ಶನ ದಲ್ಲಿ ಭಟ್ಕಳ,ಹೊನ್ನಾವರ,ಕುಮಟ, ಅಂಕೊಲಾ ಕಾರವಾರ ತಾಲೂಕಿನ ಗ್ರಾಮ ಸಂಪನ್ಮೂಲ ವ್ಯಕ್ತಿಗಳಿಗೆ ಮಂಗಳವಾರ ಹೊನ್ನಾವರ ತಾಲೂಕು ಪಂಚಾಯತ್ ಸಭಾಭವನದಲ್ಲಿ ತರಬೇತಿಯನ್ನು ಆಯೋಜಿಸಲಾಗಿತ್ತು.

ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ತಾಲೂಕು ಪಂಚಾಯತಿಯ ಸಹಾಯಕ ನಿರ್ದೇಶಕ ಕೃಷ್ಣಾನಂದ ಕೆ ಮಾತನಾಡಿ ಕೇಂದ್ರ ಸರ್ಕಾರದ ಬಹುತೇಕ ಯೋಜನೆಗಳನ್ನು ಸರ್ಕಾರ ಸಾಮಾಜಿಕ ಪರಿಶೋಧನೆ ಒಳಪಡಿಸುತ್ತಿದ್ದು ಇದರಿಂದ ಪಾರದರ್ಶಕತೆ ಕಾಣಲು ಸಾಧ್ಯವಾಗುತ್ತಿದೆ ಎಂದರು.
ಸಮಾಜದ ದುರ್ಬಲ ವರ್ಗದವರಿಗೆ ನೀಡಲಾಗುವ ಆವಾಸ್ ಯೋಜನೆಯ ಬಗ್ಗೆ ಮೂಲ ಉದ್ದೇಶ ಇವುಗಳ ಬಗ್ಗೆ ಸಾಮಾಜಿಕ ಪರಿಶೋಧನಾ ನಿರ್ದೇಶನಾಲಯದ ಭಟ್ಕಳ ತಾಲೂಕು ಸೋಶಿಯಲ್ ಆಡಿಟರ್ ಉಮೇಶ ಮುಂಡಳ್ಳಿ ಪ್ರಸ್ಥಾವಿಕವಾಗಿ ಮಾತನಾಡಿದರು.

ಸಭಾ ಕಾರ್ಯಕ್ರಮದ ನಂತರ ತಾಲೂಕು ಸೋಶಿಯಲ್ ಆಡಿಟರ್ ಗಳಾದ ಗೀತಾ ಗಾಂವಕರ್ ಅಂಕೋಲಾ, ಚಿದಾನಂದ ಗೌಡ ಹೊನ್ನಾವರ ಹಾಗೂ ಉಮೇಶ ಮುಂಡಳ್ಳಿ ಭಟ್ಕಳ ಇವರು ಗ್ರಾಮಸಂಪನ್ಮೂಲ ವ್ಯಕ್ತಿಗಳಿಗೆ ಸಾಮಾಜಿಕ ಪರಿಶೋಧನೆ ನಡೆಸುವ ಬಗ್ಗೆ ತರಬೇತಿ ನೀಡಿದರು. ಈ ಸಂದರ್ಭದಲ್ಲಿ ವಸತಿ ಯೋಜನೆಯ ನೊಡಲ್ ಅಧಿಕಾರಿ ಸಾಧನಾ ಭಟ್ ಹಾಜರಿದ್ದರು. ತರಬೇತಿ ಕಾರ್ಯಾಗಾರದಲ್ಲಿ ಆಯ್ಕೆಯಾದ ಕರಾವಳಿಯ ಐದು ತಾಲೂಕಿನ ಸಾಮಾಜಿಕ ಪರಿಶೋಧನಾ ಗ್ರಾಮಸಂಪನ್ಮೂಲ ವ್ಯಕ್ತಿಗಳು ಹಾಜರಿದ್ದರು. ಚಿದಾನಂದ ಗೌಡ ಅವರು ಸ್ವಾಗತಿಸಿ ವಂದಿಸಿದರು.

” ಶ್ರೀ ವರಹಸ್ವಾಮಿ ಜ್ಯೋತಿಷ್ಯ ಪೀಠ ” ಪ್ರಧಾನ ಜ್ಯೋತಿಷ್ಯರು : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9886460777,,,, INDIAN FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9886460777

ವಿಸ್ಮಯ ನ್ಯೂಸ್, ಹೊನ್ನಾವರ

Exit mobile version