ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ನೀರಜಾ ಟಿ.ಜಿ ಅವರು ಬೆಂಗಳೂರಿನ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂಲತಃ ಕೇರಳದವರಾಗಿರುವ ಡಾ.ನೀರಜಾ, ಬೆಂಗಳೂರಿನ ವೈದ್ಯಕೀಯ ಕಾಲೇಜು ಮತ್ತು ಸಂಸೋಧನಾ ಸಂಸ್ಥೆಯಲ್ಲಿ ನೇತ್ರಶಾಸ್ತ್ರದಲ್ಲಿ ಮಾಸ್ಟರ್ ಆಫ್ ಸರ್ಜರಿ ಮಾಡಿದ್ದು, ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ನಡೆಸಿದ ಇದೇ ವಿಭಾಗದ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಚಿನ್ನದ ಪದಕ ತಮ್ಮದಾಗಿಕೊಂಡಿದ್ದಾರೆ.
ಇವರಿಗೆ ಇತ್ತೀಚಿಗೆ ಬೆಂಗಳೂರಿನ ವೈದ್ಯಕೀಯ ಕಾಲೇಜು ಮತ್ತು ಸಂಸೋಧನಾ ಸಂಸ್ಥೆಯಲ್ಲಿ ನಡೆದ ಸಮಾರಂಭದಲ್ಲಿ ವೈದ್ಯಕೀಯ ಸಚಿವ ಡಾ.ಸುಧಾಕರ್ ಹಾಗೂ ಉಪಕುಲಪತಿ ಡಾ.ಎಸ್.ಸಚಿದಾನಂದ ಅವರು ಚಿನ್ನದ ಪದಕ ಹಾಗೂ ಪ್ರಮಾಣಪತ್ರಗಳನ್ನು ಪ್ರದಾನ ಮಾಡಿದರು. ಡಾ.ನಿರಜಾ ಅವರು ಪ್ರಸ್ತುತ ಕಾರವಾರದ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಕ್ರಿಮ್ಸ್ ನ ಮುಖ್ಯಸ್ಥರು, ಆಡಳಿತ ವರ್ಗದವರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ