ವಾಯುಭಾರ ಕುಸಿತ; ರಾಜ್ಯದಲ್ಲಿ ಫೆಬ್ರವರಿ 23 ರವರೆಗೂ ಹಲವೆಡೆ ಗುಡುಗು-ಮಿಂಚಿನಿಂದ ಕೂಡಿದ ಮಳೆ ಸಾಧ್ಯತೆ:

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣದಿಂದ ರಾಜ್ಯಾದಲ್ಲಿ ಫೆಬ್ರವರಿ 23ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ವಾಯುಭಾರ ಕುಸಿತದ ಹಿನ್ನಲಡಯಲ್ಲಿ ಬೆಂಗಳೂರು ಸೇರಿ ಹಲವೆಡೆ ಗುಡುಗು-ಸಿಡಿಲು ಸಹಿತ ಭಾರೀ ಮಳೆಯಾಗಿದೆ.ಭಾನುವಾರ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣ ಸೃಷ್ಟಿಯಾಗಿತ್ತು ಸಾಯಂಕಾಲ ಹಲವಡೆ ಮಳೆಯಾಗಿದೆ.

ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಹಳಿಯಾಳ, ಶಿರಸಿ ಮಹಾರಾಷ್ಟ್ರದ ಗಡಿಭಾಗದ ರಾಜ್ಯದ ಜಿಲ್ಲೆಗಳಾದ, ಬೆಳಗಾವಿ, ಧಾರವಾಡ, ಬಾಗಲಕೋಟೆ, ವಿಜಾಪುರ ಸೇರಿದಂತೆ ರಾಜ್ಯಾದ್ಯಂತ ಕೆಲವೆಡೆ ಗುಡುಗು ಮಿಂಚಿನಿಂದ ಕೂಡಿದ ಭಾರಿ ಮಳೆಯಾಗುವ ಸಂಭವ ಇದೇ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ನೆಚ್ಚರಿಕೆ ನೀಡಿದೆ.

ಕರ್ನಾಟಕ ಮಾತ್ರವಲ್ಲದೆ ತೆಲಂಗಾಣ, ತಮಿಳುನಾಡು, ಕೇರಳ, ಛತ್ತೀಸ್ಗಢದಲ್ಲೂ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಮಲೆನಾಡು, ಕರಾವಳಿ, ಕೊಡಗಿನಲ್ಲಿ ಫೆಬ್ರವರಿ 23ರ ಮಳೆಯಾಗುವ ಸಾಧ್ಯತೆಯಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version