Follow Us On

WhatsApp Group
ಮಾಹಿತಿ
Trending

ಹೊನ್ನಾವರ ಬ್ಲಾಕ್ ಕಾಂಗ್ರೆಸ್‌ಗೆ ನೂತನ ಅಧ್ಯಕ್ಷರ ನೇಮಕ

ಹೊನ್ನಾವರ : ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ನೂತನ ಅಧ್ಯಕ್ಷರಾಗಿ ತಾಲೂಕಿನ ಮಲ್ಲಾಪುರ ಗ್ರಾಮದ ಕುಪ್ಪು ಹನುಮಂತ ಗೌಡ ಇವರನ್ನು ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿಯವರ ಸೂಚನೆಯ ಮೇರೆಗೆ ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ವಿಭಾಗದ ಅಧ್ಯಕ್ಷರಾದ ಭೈರವ ಡಿ. ನಾಯ್ಕ ನೇಮಿಸಿ ಆದೇಶ ಹೊರಡಿಸಿದ್ದಾರೆ. ಇಂದು ಶಿರಸಿಯ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ ನಾಯ್ಕ ನೇಮಕಾತಿ ಆದೇಶ ಪತ್ರವನ್ನು ಕೆ.ಚ್.ಗೌಡ ಅವರಿಗೆ ನೀಡಿ ತಕ್ಷಣ ಪಕ್ಷದ ಸಂಘಟನೆಯನ್ನು ಚುರುಕುಗೊಳಿಸುವಂತೆ ನೂತನ ಅಧ್ಯಕ್ಷರಿಗೆ ಶುಭ ಹಾರೈಸಿದರು.

ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಮಂಜುನಾಥ ಗೌಡ ಮತ್ತು ಪಟ್ಟಣದ ರಾಯಲ್‌ಕೇರಿಯ ಗಜಾನನ ರಾಮಕೃಷ್ಣ ನಾಯ್ಕ ಇವರನ್ನು ಜಿಲ್ಲಾ ಸಮಿತಿಗೆ ನೇಮಿಸಿ ಆದೇಶಿಸಲಾಗಿದೆ. ಈ ಸಂದರ್ಭದಲ್ಲಿ ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ ಎನ್. ತೆಂಗೇರಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಚ್. ಎಂ. ನಾಯ್ಕ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರವಿ ಶೆಟ್ಟಿ, ಕವಲಕ್ಕಿ, ಸುದರ್ಶನ ಹೊನ್ನಾವರ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಹೊನ್ನಾವರ

Back to top button