ನಾಪತ್ತೆಯಾದ ವಿದ್ಯಾರ್ಥಿನಿ ಕಾಡಿನಲ್ಲಿ ಪತ್ತೆ: ಬೈಕ್ ನಲ್ಲಿ ಬಂದವರು ಮಾಡಿದ್ದೇನು?

ಯಲ್ಲಾಪುರ: ವಿದ್ಯಾರ್ಥಿಯೋರ್ವಳು ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಳು. ಸಂಜೆಯಿಂದ ರಾತ್ರಿಯವರೆಗೆ ಗ್ರಾಮಸ್ಥರೆಲ್ಲ ಸೇರಿ ಹುಡುಕಿದರೂ ವಿದ್ಯಾರ್ಥಿನಿ ಪತ್ತೆಯಾಗಿರಲಿಲ್ಲ. ಹೀಗೆ ಹುಡುಕುತ್ತಿರುವಾಗ ತಡರಾತ್ರಿ ಮನೆಯ ಸಮೀಪದ ಕಾಡಿನಲ್ಲಿ ಮರಕ್ಕೆ ಕಟ್ಟಿ ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತಂಕ ಮತ್ತು ಹಲವು ಅನುಮಾನಕ್ಕೆ ದಾರಿಮಾಡಿಕೊಟ್ಟಿದೆ. ಆದರೆ, ವಿದ್ಯಾರ್ಥಿನಿಗೆ ಯಾವುದೇ ಅಪಾಯವಾಗಿಲ್ಲ. ಈ ಘಟನೆಯ ಬಗ್ಗೆ ವಿದ್ಯಾರ್ಥಿನಿ ವಿವರಿಸಿದ್ದು, ತನಗಾದ ಕಹಿ ಅನುಭವಗಳನ್ನು ಹಂಚಿಕೊಂಡಿದ್ದಾಳೆ.

ಯಲ್ಲಾಪುರದ ನಂದೊಳ್ಳಿಯ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿರುವ ವಿದ್ಯಾರ್ಥಿನಿ ಸಂಜೆ ಶಾಲೆಯಿಂದ ಮಾಗೋಡ ಬಸ್‌ನಲ್ಲಿ ಮನೆಗೆ ಬರುತ್ತಿದ್ದಳು. ಮನೆ ಹತ್ತಿರದ ಬಸ್ ಸ್ಟಾಪ್ ನಂದೊಳ್ಳಿಯಲ್ಲಿ ಇಳಿದಿದ್ದಳು. ಆದರೆ, ಬಸ್ ಸ್ಟಾಪ್ ನಲ್ಲಿ ಇಳಿದ ವಿದ್ಯಾರ್ಥಿನಿಗೆ ಬೈಕ್‌ನಲ್ಲಿ ಬಂದ ಮೂವರು ವಿಳಾಸ ಕೇಳಿದ್ದಾರಂತೆ. ವಿಳಾಸ ಕೇಳುವ ನೆಪದಲ್ಲಿ ಮಾತನಾಡಿಸಿ ತನ್ನನ್ನು ಅಪಹರಿಸಿದ್ದರು ವಿದ್ಯಾರ್ಥಿನಿ ಹೇಳಿದ್ದಾಳೆ. ರಾತ್ರಿ ವೇಳೆ ಕೈಕಾಲು ಕಟ್ಟಿ ಮನೆಯ ಬಳಿಯ ಕಾಡಿನಲ್ಲಿ ಬಿಟ್ಟು ಹೋಗಿರುವುದಾಗಿ ಹೇಳಿಕೆ ನೀಡಿದ್ದು, ಬೈಕ್‌ನಲ್ಲಿ ಬಂದವರು ಯಾರು? ಯಾಕೆ ಹೀಗೆ ಮಾಡಿದರು ಎಂಬುದನ್ನು ಪತ್ತೆ ಹಚ್ಚಬೇಕಿದೆ.

ಸಂಜೆ ವೇಳೆ ಬೈಕ್ ಮೇಲೆ ಯುವತಿಯನ್ನು ಯಾರೋ ಮಾಗೋಡ ಕಡೆ ಕರೆದೊಯ್ಯುವುದನ್ನು ನೋಡಿರುವುದಾಗಿ ಕೆಲ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದರು. ಇದೇ ವೇಳೆ ಪೊಲೀಸರು ವಿದ್ಯಾರ್ಥಿನಿಯ ಮನೆಗೂ ಭೇಟಿ ನೀಡಿ ಕುಟುಂಬದವರೊoದಿಗೆ ಚರ್ಚಿಸಿದ್ದಾರೆ. ತನಿಖೆಯನ್ನು ಚುರುಕುಗೊಳಿಸಲಾಗಿದೆ. ವಿದ್ಯಾರ್ಥಿನಿಯನ್ನು ಕಟ್ಟಿ ಹಾಕಿದ್ದ ಸ್ಥಳವನ್ನು ಡಿವೈಎಸ್‌ಪಿ ರವಿ ನಾಯ್ಕ, ಪಿಐ ಸುರೇಶ ಯಳ್ಳೂರ ಹಾಗೂ ಪಿಎಸ್‌ಐ ಮಂಜುನಾಥ ಗೌಡರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಯಲ್ಲಾಪುರ

Exit mobile version