Follow Us On

WhatsApp Group
Important
Trending

ರಸ್ತೆ ಅಪಘಾತ: ಖ್ಯಾತ ಯಕ್ಷಗಾನ ಕಲಾವಿದ ಸುಬ್ರಹ್ಮಣ್ಯ ಚಿಟ್ಟಾಣಿಗೆ ಗಂಭೀರ ಗಾಯ

ಹೊನ್ನಾವರ: ಖ್ಯಾತ ಯಕ್ಷಗಾನ ಕಲಾವಿದ, ಪದ್ಮಶ್ರೀ ಪುರಸ್ಕøತ ದಿವಂಗತ ಚಿಟ್ಟಾಣಿ ರಾಮಚಂದ್ರ ಹೆಗಡೆಯವರ ಪುತ್ರ, ಸುಬ್ರಹ್ಮಣ್ಯ ಚಿಟ್ಟಾಣಿಯವರು ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಸ್ತೆಯಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಈ ದುರ್ಘಟನೆಯಲ್ಲಿ ಸುಬ್ರಹ್ಮಣ್ಯ ಚಿಟ್ಟಾಣಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ನಡೆದಿರೋದು ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಡಿಬಾಳದಲ್ಲಿ.

ಈ ಅಪಘಾತದಲ್ಲಿ ಅವರ ದೇಹಕ್ಕೆ ಗಂಭೀರ ಪೆಟ್ಟು ಬಿದ್ದಿದ್ದು, ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪದ್ಮಶ್ರೀ ಪುರಸ್ಕøತ ದಿವಂಗತ ಚಿಟ್ಟಾಣಿ ರಾಮಚಂದ್ರ ಹೆಗಡೆಯವರಾದ ತಮ್ಮ ತಂದೆಯವರ ಹಾದಿಯಲ್ಲೇ ನಡೆದು, ಯಕ್ಷಗಾನ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದರು ಸುಬ್ರಹ್ಮಣ್ಯ ಚಿಟ್ಟಾಣಿ. ಅವರ ಆರೋಗ್ಯ ಸ್ಥಿತಿಯ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ. ಮೆದುಳಿಗೆ , ಬೆನ್ನುಹುರಿಗೆ ಯಾವುದೇ ಅಪಾಯವಾಗಿಲ್ಲ. ನಾಲಿಗೆಗೆ ಪೆಟ್ಟಾಗಿದ್ದು,‌ಮುಖ ಮತ್ತು ಮೂಗಿಗೆ ಪೆಟ್ಟಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಹೊನ್ನಾವರ

Back to top button