Join Our

WhatsApp Group
Info
Trending

ಹಿರೇಗುತ್ತಿ ಹೈಸ್ಕೂಲಿನಲ್ಲಿ ನೀರು ಮತ್ತು ನೈರ್ಮಲ್ಯ ಕುರಿತು ಚರ್ಚಾ ಸ್ಪರ್ಧೆ ಕಾರ್ಯಕ್ರಮ

ಹಿರೇಗುತ್ತಿ: ಕುಮಟಾ ತಾಲೂಕಿನ ಹಿರೇಗುತ್ತಿಯ ಸೆಕೆಂಡರಿ ಹೈಸ್ಕೂಲಿನಲ್ಲಿ ಜಿಲ್ಲಾ ಪಂಚಾಯತ್ ಉತ್ತರಕನ್ನಡ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಕಾರವಾರ(ರಿ) ಸೆಕೆಂಡರಿ ಹೈಸ್ಕೂಲ್ ಹಿರೇಗುತ್ತಿ ಸಹಯೋಗದಲ್ಲಿ ಜಲಜೀವನ ಮಿಷನ್(ಜೆ.ಜೆ.ಎಂ) ಯೋಜನೆ ಅನುಷ್ಠಾನ ಕಾರ್ಯಕ್ರಮದ ಅಡಿಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ನೀರು ಮತ್ತು ನೈರ್ಮಲ್ಯ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಚರ್ಚಾ ಸ್ಫರ್ಧೆ ಆಯೋಜಿಸಲಾಯಿತು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ಶಿಕ್ಷಕ ವಿಶ್ವನಾಥ ಪಿ ಬೇವಿನಕಟ್ಟಿ “ಮಾನವನ ಮೂಲಭೂತ ಅಗತ್ಯದಲ್ಲಿ ನೀರು ಪ್ರಮುಖವಾಗಿದೆ ಆದ್ದರಿಂದ ನೀರನ್ನು ಮಿತವಾಗಿ ಬಳಸಬೇಕು ಅಲ್ಲದೇ ಕೇಂದ್ರ ಸರ್ಕಾರದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜಲಶಕ್ತಿ ಮಂತ್ರಾಲಯ ಭಾರತ ಸರ್ಕಾರ ನವದೆಹಲಿರವರು 2021 ರ ವೇಳೆಗೆ ಗ್ರಾಮೀಣ ಕುಟುಂಬಗಳಿಗೆ ಶುದ್ಧ ಹಾಗೂ ಸುರಕ್ಷಿತ ಮತ್ತು ಅಗತ್ಯ ಪ್ರಮಾಣದ ಕುಡಿಯುವ ನೀರು ಒದಗಿಸುವ ಗುರಿ ಹೊಂದಿದೆ” ಎಂದು ನೀರಿನ ಮಹತ್ವವನ್ನು ತಿಳಿಸಿದರು.

ಪ್ರಾಸ್ತಾವಿಕ ಮಾತುಗಳನ್ನಾಡಿದ ಎನ್ ರಾಮು ಹಿರೇಗುತ್ತಿ “ಮಾನವ ಇರುವುದು ಪ್ರಕೃತಿ ಮಾತೆಯ ಸೆರಗಲ್ಲಿ ಈ ಪ್ರಕೃತಿಯಲ್ಲಿ ಅಂದವುoಟು, ಚಂದವುoಟು, ಅಮರತ್ವವು ಉಂಟು, ಪ್ರಕೃತಿ ಮಾನವನ ಎಲ್ಲ ಅಗತ್ಯಗಳನ್ನು ಪೂರೈಸಿವೆ ಆದರೆ ಮಾನವ ಪ್ರಕೃತಿಯನ್ನು ಶೋಷಣೆ ಮಾಡುತ್ತಿದ್ದಾನೆ. ಪ್ರಕೃತಿ ನೀಡಿರುವ ನೀರು, ಗಾಳಿ ಮನುಷ್ಯನ ಅಗತ್ಯಗಳನ್ನು ಸರಿಯಾಗಿ ಮಿತವಾಗಿ ಬಳಸಿಕೊಳ್ಳಬೇಕು. ಮಾನವನ ಶೋಷಣೆಗೆ ಪ್ರಕೃತಿ ಮಾತೆ ಮುನಿದರೆ ಮಾನವನ ಅಳಿವಿಗೆ ಅರೆಕ್ಷಣ ಸಾಕು ಎಂಬುದನ್ನು ನಾವೆಲ್ಲರೂ ಅರ್ಥಮಾಡಿಕೊಳ್ಳಬೇಕೆಂದರು”.

ಶಿಕ್ಷಕ ಮಹಾದೇವ ಗೌಡ ಮಾತನಾಡಿ “ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಗ್ರಾಮೀಣ ಜನರಿಗಾಗಿ ಜಲಜೀವನ ಮಿಷನ್ ಯೋಜನೆಯಡಿ ಪ್ರತಿ ಗ್ರಾಮೀಣ ಕುಟುಂಬಗಳಿಗೆ ಕಾರ್ಯತ್ಮಕಗಳ ಹಾಗೂ ಶುದ್ಧ ಸುರಕ್ಷಿತ ಕುಡಿಯುವ ನೀರಿನ ಜಾಗೃತಿಗಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡುತ್ತಿದೆ ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ನೀರಿನ ಮತ್ತು ನೈರ್ಮಲ್ಯ ಸಂರಕ್ಷಣೆಯನ್ನು ಮನುಷ್ಯನು ಸರಿಯಾಗಿ ನಿರ್ವಹಣೆ ಮಾಡುತ್ತಿರುವನೆ? ಎಂಬ ವಿಷಯದ ಕುರಿತು ಚರ್ಚಾ ಸ್ಪರ್ಧೆ ಹಮ್ಮಿಕೊಳ್ಳಲಾಗಿದೆ” ಎಂದರು.
ಕಾರ್ಯಕ್ರಮದ ವೇದಿಕೆಯಲ್ಲಿ ಶಿಕ್ಷಕರಾದ ಬಾಲಚಂದ್ರ ಹೆಗಡೆಕರ್, ನಾಗರಾಜ ನಾಯಕ, ಇಂದಿರಾ ನಾಯಕ, ಜಾನಕಿ ಗೊಂಡ, ಕವಿತಾ ಅಂಬಿಗ ಉಪಸ್ಥಿತರಿದ್ದರು.

ಚರ್ಚಾ ಸ್ಪರ್ಧೆಯಲ್ಲಿ ಅನೇಕ ವಿದ್ಯಾರ್ಥಿಗಳ ಭಾಗವಹಿಸಿದ್ದರು. ಪ್ರಥಮ ಕುಮಾರಿ ನಾಗಶ್ರೀ ಪಟಗಾರ , ಕುಮಾರ ಸನಿದ ನಾಯಕ ದ್ವಿತೀಯ, ಕುಮಾರಿ ನಿರ್ಮಲಾ ಕವರಿ ತೃತೀಯ ವಿಜೇತರಾಗಿ ಆಯ್ಕೆ ಮಾಡಲಾಯಿತು. ಎನ್ ರಾಮು ಹಿರೇಗುತ್ತಿ ಕಾರ್ಯಕ್ರಮ ನಿರ್ವಹಿಸಿದರು. ಶ್ರೀಮತಿ ಶಿಲ್ಪಾ ವಿ ನಾಯಕ ಕಾರ್ಯಕ್ರಮ ಸಂಯೋಜನೆ ಮಾಡಿದರು.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

Check Also
Close
Back to top button