Important
Trending

ಜಾತ್ರೆ ಮುಗಿಸಿಕೊಂಡು ಮರಳುತ್ತಿದ್ದ ವೇಳೆ ಪಲ್ಟಿಯಾದ ಟ್ರ್ಯಾಕ್ಟರ್: 17 ಭಕ್ತರಿಗೆ ಗಾಯ

ಜೋಯಡಾ: ಅವರೆಲ್ಲರೂ ಜಾತ್ರೆ ಮುಗಿಸಿಕೊಂಡು, ದೇವರ ದರ್ಶನ ಮುಗಿಸಿಕೊಂಡು ಟ್ರ್ಯಾಕ್ಟರ್ ನಲ್ಲಿ ಬರುತ್ತಿದ್ದವರು. ಹೌದು, ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ತಾಲೂಕಿನ ಉಳವಿ ಚನ್ನಬಸವೇಶ್ವರನ ದರ್ಶನ ಪಡೆದು, ಜಾತ್ರೆ ಮುಗಿಸಿಕೊಂಡು ಟ್ರ್ಯಾಕ್ಟರ್ ನಲ್ಲಿ ಬರುತ್ತಿರುವಾಗ ಟ್ರ್ಯಾಕ್ಟರ್, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪರಿಣಾಮ 20 ಜನರಿದ್ದ ಟ್ರ್ಯಾಕ್ಟರ್ ನೆಲಕ್ಕುರುಳಿದೆ. ಈ ದುರ್ಘಟನೆಯಲ್ಲಿ ಟ್ರ್ಯಾಕ್ಟರ್ ನಲ್ಲಿದ್ದ 17 ಭಕ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನಾಲ್ವರಿಗೆ ಗಂಭೀರಗಾಯವಾಗಿದ್ದು, ಇವರನ್ನು ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲಿಸಲಾಗಿದೆ.

ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನುವ ಮಾಹಿತಿ ದೊರೆತಿದೆ. ಜೋಯಿಡಾದ ಚಾಪೋಲಿ ಘಟ್ಟದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಟ್ರ್ಯಾಕ್ಟರ್ ನಲ್ಲಿ ಇದ್ದವರು ಧಾರವಾಡ ನವಲಗುಂದಕ್ಕೆ ತೆರಳುತ್ತಿದ್ದರು. ಜೋಯ್ಡಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಳವಿ ಚನ್ನಬಸವೇಶ್ವರನ ಜಾತ್ರೆ ಟ್ರ್ಯಾಕ್ಟರ್ ನಲ್ಲಿ ಭಕ್ತರು ಬರುವುದು ವಿಶೇಷವಾಗಿದ್ದು, ಈ ಬಾರಿ ಜಾತ್ರೆಗೆ 800 ಕ್ಕೂ ಅಧಿಕ ಟ್ರ್ಯಾಕ್ಟರ್ ಮೂಲಕ ಭಕ್ತರು ಆಗಮಿಸಿ, ದೇವರ ದರ್ಶನ ಪಡೆದಿದ್ದರು.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Back to top button