ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು ಸಂಪೂರ್ಣ ಸುಟ್ಟುಕರಕಲು

ಕಾರವಾರ: ಅಂಗಡಿಗೆ ಬೇಕರಿ ವಸ್ತುಗಳನ್ನು ತುಂಬಿಸಿಕೊಂಡು ತೆರಳುತ್ತಿರುವಾಗ ಮಾರ್ಗ ಮಧ್ಯೆ ದಿಢೀರ್ ಆಗಿ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ತಾಲೂಕಿನ ಕೆರವಡಿ ಸಮೀಪ ನಡೆದಿದೆ. ತಕ್ಷಣವೇ ಕೆಳಗಿಳಿದ ಚಾಲಕ ಬೆಂಕಿ ನಂದಿಸಲು ಪ್ರಯತ್ನ ಮಾಡಿದ್ದು, ಆದರೆ, ಸಾಧ್ಯವಾಗಿಲ್ಲ. ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕಾರು, ಕ್ಷಣಾರ್ಧದಲ್ಲೇ ಸುಟ್ಟುಕರಕಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ಆಗಮಿಸುವ ಮೊದಲೇ ಸಂಪೂರ್ಣ ಕಾರು ಸುಟ್ಟುಹೋಗಿದೆ.

ಬೇಕರಿ ವಸ್ತುಗಳನ್ನು ತುಂಬಿಸಿಕೊಂಡು ಸಾಗಿಸುತ್ತಿರುವಾಗ ಮಾರ್ಗ ಮಧ್ಯೆ ಬೆಂಕಿ ಹೊತ್ತಿಕೊಂಡಿದ್ದು, ಈ ದುರ್ಘಟನೆಗೆ ಇನ್ನೂ ಕಾರಣ ತಿಳಿದುಬಂದಿಲ್ಲ. ಕಾರವಾರದ ಮಲ್ಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ  ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್  ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ ,  ಫೋನಿನಲ್ಲಿ ಪರಿಹಾರ,  ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ,  ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್, ಕಾರವಾರ

Exit mobile version