ಸೈಕಲ್ ತಳ್ಳಿಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಬುಲೆರೊ | ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಸಾವು

ಸಿದ್ದಾಪುರ: ಬುಲೆರೋ ವಾಹನವನ್ನು ನಿಷ್ಕಾಳಜಿ ಮತ್ತು ಅತಿ ವೇಗವಾಗಿ ಚಲಾಯಿಸಿಕೊಂಡು ಬಂದು, ಸೈಕಲ್ ತಳ್ಳಿಕೊಂಡು ಹೋಗುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದಳು. ಇದೀಗ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ತಾಲೂಕಿನ ಹುಲ್ಲುಂಡೆ ಗ್ರಾಮದ ಹೊಸಗದ್ದೆಯ ಸಮೀಪ ಸೈಕಲ್ ತಳ್ಳಿಕೊಂಡು ಹೋಗುತ್ತಿರುವ ವೇಳೆ ಬುಲೆರೋ ಡಿಕ್ಕಿ ಹೊಡೆದಿದ್ದು, ವಿಧ್ಯಾರ್ಥಿನಿ ಗಂಭೀರ ಗಾಯಗೊಂಡಿದ್ದಳು.

ಮೃತಪಟ್ಟ ವಿದ್ಯಾರ್ಥಿನಿ ಸಹನಾ ಜಟಪ್ಪ ಪಟಗಾರ ಎಂದು ತಿಳಿದುಬಂದಿದೆ. ಬುಲೆರೋ‌ ಡಿಕ್ಕಿ ಹೊಡೆದ ಪರಿಣಾಮ ವಿಪರೀತ ಪೆಟ್ಟು ತಗುಲಿದ ಬಾಲಕಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಧಾರವಾಡ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಬುಲೆರೋ ವಾಹನವನ್ನು ವೆಂಕಟ್ರಮಣ ಗಣಪತಿ ನಾಯ್ಕ ಎಂಬುವವರಿಗೆ ಸೇರಿದ್ದೆಂದು ಮಾಹಿತಿದೊರೆತಿದೆ. ನಿಷ್ಕಾಳಜಿ ಮತ್ತು ಅತಿ ವೇಗವಾಗಿ ಚಲಾಯಿಸಿದ್ದರಿಂದ ಈ ಅಪಘಾತ ಸಂಭವಿಸಿದ್ದಾಗಿ ಪೋಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹದಲ್ಲಿ ಇದ್ದಾರೆ ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದರು ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧಮೊಬೈಲ್ : 9964108888

ವಿಸ್ಮಯ ನ್ಯೂಸ್ ಸಿದ್ದಾಪುರ

Exit mobile version