ಕಾರನ್ನು ತಡೆದು ಪರಿಶೀಲಿಸಿದಾಗ ಅಕ್ರಮವಾಗಿ ಸಾಗಿಸುತ್ತಿದ್ದ 150 ಕೆ.ಜಿ ಗೋಮಾಂಸ ಪತ್ತೆ: ಭಟ್ಕಳದ ಇಬ್ಬರ ಬಂಧನ
ಭಟ್ಕಳ: ಸುಮಾರು 150 ಕೆಜಿ ತೂಕದ ಗೋಮಾಂಸವನ್ನು ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ರಾತ್ರಿ ರೌಂಡ್ಸ್ ನಲ್ಲಿದ್ದ ಪೊಲೀಸರಿಗೆ ಕಾರೊಂದರಲ್ಲಿ ಮೀನು ತುಂಬುವ ಬಾಕ್ಸ್ನಲ್ಲಿ ದನದ ಮಾಂಸ ತುಂಬಿಸಿಕೊoಡು ಭಟ್ಕಳ ಕಡೆಯಿಂದ ಬರಲಾಗುತ್ತಿದೆ ಎಂದು ಖಚಿತ ಮಾಹಿತಿ ಲಭ್ಯವಾಗಿತ್ತು. ಹೀಗಾಗಿ ಪೊಲೀಸರು ತಪಾಸಣೆಯನ್ನು ಬಿಗಿಗೊಳಿಸಿದ್ದರು.
ಶಿರೂರು ಚೆಕ್‌ಪೋಸ್ಟ್ ಬಳಿ ರಾತ್ರಿ 9.47 ರ ಹೊತ್ತಿಗೆ ಕಾರನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ, ವಾಹನದಲ್ಲಿ ಇಬ್ಬರು ವ್ಯಕ್ತಿಗಳ ಮೇಲೆ ಪೊಲೀಸರಿಗೆ ಅನುಮಾನ ಮೂಡಿದೆ. ಈ ವೇಳೆ ಕಾರಿನ ಹಿಂಬಾಗದಲ್ಲಿ 3 ಪ್ಲಾಸ್ಟಿಕ್ ಚೀಲ ಕಂಡುಬoದಿದೆ. ಕೂಡಲೇ ಪರಿಶೀಲಿಸಿದಾಗ ಜಾನುವಾರು ಮಾಂಸ ಇರುವುದು ಪತ್ತೆಯಾಗಿದೆ. 40 ಸಾವಿರ ರೂಪಾಯಿ ಅಂದಾಜು ಮೌಲ್ಯದ ಒಟ್ಟು ಸುಮಾರು 150 ಕೆ.ಜಿ ತೂಕದ ಮಾಂಸ, 5 ಲಕ್ಷ ಮೌಲ್ಯದ ಕಾರು ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬoಧ ಭಟ್ಕಳದ ಶೌಕತ್ ಅಲಿ ಸೈಯದ್ ಮೊಸ್ಸಿನ್ (52), ಇಷ್ತಿಯಾಕ್ ಅಹಮ್ಮದ್ ಇಕ್ಕೇರಿ (41) ಇವರನ್ನು ಬಂಧಿಸಲಾಗಿದೆ.
ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
ವಿಸ್ಮಯ ನ್ಯೂಸ್, ಭಟ್ಕಳ