ದಾರಿ ಮಧ್ಯೆ ಆ್ಯಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ: ವೈದ್ಯಕೀಯ ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ
ಮುಂಡಗೋಡ: ತಾಲೂಕಿನ ಮಹಿಳೆಯೊಬ್ಬಳು ಹೆರಿಗೆ ನೋವಿನಿಂದ ಬಳಲುತ್ತಿದ್ದಳು. ಈ ವೇಳೆ ಮನೆಯವರು 108 ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆದರೆ, ಮಾರ್ಗ ಮಧ್ಯೆಯೇ ಮಹಿಳೆಗೆ ನೋವು ಹೆಚ್ಚಾಗಿದೆ. ಪರಿಸ್ಥಿತಿಯ ಗಂಭೀರತೆ ಅರಿತ ಆ್ಯಂಬುಲೆನ್ಸ್ ಸಿಬ್ಬಂದಿ ಕೂಡಲೇ ರಸ್ತೆಯ ಪಕ್ಕಕ್ಕೆ ವಾಹನ ನಿಲ್ಲಿಸಿ, ಹೆರಿಗೆಯನ್ನು ಯಶಸ್ವಿಯಾಗಿ ಮಾಡಿಸಿದ್ದಾರೆ. ಇವರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಹೌದು, ವಾಹನದಲ್ಲಿದ್ದ ತುರ್ತು ವೈದ್ಯಕೀಯ ತಂತ್ರಜ್ಞ ಧನರಾಜ ಸಿ. ಮತ್ತು ಚಾಲಕ ಪ್ರಕಾಶ ಬಿ.,, ಹೆರಿಗೆಯನ್ನು ಸುರಕ್ಷಿತವಾಗಿ ಮಾಡಿಸಿದ 108 ಆ್ಯಂಬುಲೆನ್ಸ್ ಸಿಬ್ಬಂದಿ. ಹೆರಿಗೆಯಾದ ಗುಂಜಾವತಿ ಗ್ರಾಮದ ಫರ್ಜಾನ್ ರಿಯಾಜ್ ದೇವಕಾರಿ ಮತ್ತು ಮಗು ಇಬ್ಬರು ಸುರಕ್ಷಿತವಗಿದ್ದಾರೆ ಎಂದು ತಿಳಿದುಬಂದಿದೆ.
ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9964108888,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್