ಟೀವಿ ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೆ ತಂದೆ-ತಾಯಿ ಮೇಲೆ ಹಲ್ಲೆ ಮಾಡಿದ ಸ್ವಂತ ಮಗ: ಠಾಣೆ ಮೆಟ್ಟಿಲೇರಿದ ವೃದ್ಧ ತಂದೆ

ಹಳಿಯಾಳ: ಟೀವಿ ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೆ ಹೆತ್ತ ಮಗನೇ ತನ್ನ ತಂದೆ ತಾಯಿಯ ಮೇಲೆ ಹಲ್ಲೆ ಮಾಡಿದ ಘಟನೆ ಉತ್ತರಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ನಡೆದಿದೆ. ಹೌದು, ಕೆಲ ಕಾರಣಾಂತರಗಳಿಂದ ತಂದೆ – ಮಗ ಒಂದೇ ಮನೆಯಲ್ಲಿ ಬೇರೆ ಬೇರೆಯಾಗಿ ವಾಸುತ್ತಿದ್ದರು. ಅಡುಗೆ ಸಹ ಬೇರೆ ಬೇರೆಯಾಗಿ ಮಾಡಲಾಗುತ್ತಿತ್ತು. ಟೀವಿ ನೋಡುತ್ತಿದ್ದಾಗ ಸೌಂಡ್ ಕಡಿಮೆಮಾಡುವಂತೆ ತಂದೆ ಮಗನಿಗೆ ಹೇಳಿದ್ದಾನೆ. ಇದರಿಂದ ಕೋಪಗೊಂಡ ತನ್ನ ಮಗ ಮತ್ತು ಸೊಸೆ, ತನ್ನ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ತಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾನೆ.

ಹಲ್ಲೆ ಮಾತ್ರವಲ್ಲ, ಅವಾಚ್ಯ ಶಬ್ದದಿಂದ ನಿಂದಿಸಿದ್ದಾನೆ ಎನ್ನಲಾಗಿದೆ. ಅಷ್ಟು ಜೋರಾಗಿ ಯಾಕೆ ಟೀವಿ ಹಚ್ಚಿಕೊಂಡಿದ್ದೀಯಾ? ಸೌಂಡ್ ಕಡಿಮೆ ಮಾಡು ಎಂದಿದ್ದಕ್ಕೆ ಅವಾಚ್ಯ ಶಬ್ದದಿಂದ ನಿಂದಿಸಿ, ಹಲ್ಲೆ ಮಾಡಿದ್ದಾನೆ. ಈ ವೇಳೆ ತನ್ನ ಹೆಂಡತಿ ಕೂಡಾ ಇದ್ದಳು. ಅವಳ ಮೇಲೂ ಹಲ್ಲೆಗೆ ಮುಂದಾಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಸಂಬಂಧ ಹಳಿಯಾಳ ಠಾಣೆಯಲ್ಲಿ 60 ವರ್ಷದ ತಂದೆ ನಾಮದೇವ ಹನುಂತ ಘಾಡಿ, ಮಗ ಜಯದೇವ ಘಾಡಿ ಹಾಗು ಸೊಸೆ ಲಕ್ಷ್ಮೀ ಜಯದೇವ ಘಾಡಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9886460777,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777..

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,

Exit mobile version