Important

ಅಂಗಡಿಯ ಬಾಗಿಲು ಮುರಿದು ಒಳ ನುಗ್ಗಿದ ಕಳ್ಳರು | ತಡರಾತ್ರಿ ಹಣ ದೋಚಿ ಪರಾರಿ

ಹೊನ್ನಾವರ: ದುಷ್ಕರ್ಮಿಗಳು ಕಿರಾಣಿ ಅಂಗಡಿಯೊಂದಕ್ಕೆ ನುಗ್ಗಿ ಅಂಗಡಿಯ ಬೀಗವನ್ನು‌ ಮುರಿದು ಲಕ್ಷಾಂತರ ರೂಪಾಯಿ ಹಣವನ್ನು ಕದ್ದು ಪರಾರಿಯಾದ ಘಟನೆ ಹೊನ್ನಾವರ ತಾಲೂಕಿನ ಹಳದೀಪುರ ಅಗ್ರಹಾರದಲ್ಲಿ ನಡೆದಿದೆ.

ತಾಲೂಕಿನ ಹಳದೀಪುರ ಅಗ್ರಹಾರದ ನವೀಲಗೋಣ ಕ್ರಾಸ್‌ನಲ್ಲಿ ನಿತ್ಯಾನಂದ ಹರಿ ಪೈ ಎಂಬುವವರಿಗೆ ಸೇರಿದ ಕಿರಾಣಿ ಅಂಗಡಿಯಲ್ಲಿ ಕಳ್ಳತನವಾಗಿದೆ. ಅಂಗಡಿ ಮಾಲೀಕರು ರಾತ್ರಿ ಅಂಗಡಿ ಬಂದ್ ಮಾಡಿ ಮನೆಗೆ ಹೋಗಿದ್ದರು. ಆದರೆ ತಡರಾತ್ರಿ ದುಷ್ಕರ್ಮಿಗಳು ಅಂಗಡಿಯ ಬಾಗಿಲು ಮುರಿದು ಒಳ ನುಗ್ಗಿದ್ದು, ಡ್ರಾವರ್ ನಲ್ಲಿದ್ದ ಸುಮಾರು 1.35 ಲಕ್ಷ ರೂಪಾಯಿಯನ್ನು ಕದ್ದು ಪರಾರಿಯಾಗಿದ್ದಾರೆ‌ ಎಂಬ ಮಾಹಿತಿ ಲಭಿಸಿದೆ.

ಹೊನ್ನಾವರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು,‌ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಶ್ರೀ ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಪೀಠ “ಪ್ರಧಾನ ತಾಂತ್ರಿಕ್ : ಶ್ರೀ ವಾಸುದೇವನ್ ಮೊಬೈಲ್ : 9886460777,,,, INDIAN FAMOUS ASTROLOGER, ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ಪರಸ್ತ್ರೀಯರ ವ್ಯಾಮೋಹ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9886460777..

ವಿಸ್ಮಯ ನ್ಯೂಸ್ ಹೊನ್ನಾವರ

Back to top button