ನಕಲಿ ವೈದ್ಯರು ಕಂಡು ಬಂದಲ್ಲಿ ಪ್ರಕರಣ ದಾಖಲಿಸಿ : ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ
ಅಂಕೋಲಾ- ತಾಲೂಕಿನ ವಿವಿಧ ಪ್ರದೇಶಗಳಲ್ಲಿ ವಿದ್ಯಾರ್ಹತೆಯಿಲ್ಲದ ಕೆಲ ನಕಲಿ ಡಾಕ್ಟರುಗಳು ನಾಯಿ ಕೊಡೆಗಳಂತೆ ತಪಾಸಣೆ ಕೇಂದ್ರ ತೆರೆದು, ಜನರ ಮುಗ್ದತೆಯನ್ನೇ ಬಂಡವಾಳವಾಗಿಸಿಕೊಂಡು ಕರೊನಾಕ್ಕೂ ಚಿಕಿತ್ಸೆ ನೀಡುತ್ತಿದ್ದಾರೆ ಎನ್ನುವ ಆರೋಪ ಸಾರ್ವಜನಿಕ ವಲಯದಿಂದ ಅಲ್ಲಲ್ಲಿ ಕೇಳಿ ಬಂದಿದ್ದು, ಈ ಕುರಿತು ಮಾಧ್ಯಮದವರು ಜಿಲ್ಲಾಧಿಕಾರಿಗಳ ಗಮನ ಸೆಳೆದಾಗ, ಅಂತಹ ನಕಲಿ ಡಾಕ್ಷರಗಳು ಕಂಡು ಬಂದಲ್ಲಿ ಕೂಡಲೇ ಕೇಸ್ ದಾಖಲಿಸಿ ಎ೦ದು ತಾಲೂಕಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರಲ್ಲದೇ, ಸಾರ್ವಜನಿಕರು ಸಹ ಕಡಿಮೆ ವೆಚ್ಚದ ಚಿಕಿತ್ಸೆ ಮತ್ತಿತರ ಕಾರಣಗಳಿಂದ ನಕಲಿಗಳ ಅಪಾಯದಿಂದ ದೂರ ಇರುವಂತೆ ಎಚ್ಚರಿಕೆ ಸಂದೇಶ ನೀಡಿದರು.
ಜಿಲ್ಲಾಧಿಕಾರಿ ಶುಕ್ರವಾರ ಸಂಜೆ ಪಟ್ಟಣದ ತಾಲೂಕಾ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ, ಮಾಧ್ಯಮದವರೊಂದಿಗೆ ಮಾತನಾಡಿ,ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆಯಾಗದಂತೆ ಖಾಸಗಿ ಪೂರೈಕೆದಾರರೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಜಿಲ್ಲೆಯ ಶಿರಸಿ ಕುಮಟಾ ಸೇರಿದಂತೆ ಭಟ್ಕಳ ಇನ್ನಿತರ ಆಸ್ಪತ್ರೆಗಳಿಗೆ ಭೇಟಿ ನೀಡಿದ್ದು, ಕೋವಿಡ್ ವಿರುದ್ಧ ಹೋರಾಡಲು ಜಿಲ್ಲಾಡಳಿತ ಸಕಲ ಸಿದ್ಧತೆಯನ್ನು ಮಾಡಿಕೊಂಡಿದೆ. ಆದರೂ ಜಿಲ್ಲೆಯಲ್ಲಿ ಇತ್ತೀಚಿಗೆ ಕೊ ವಿಡ್ ಪಾಸಿಟಿವ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಜಿಲ್ಲೆಯ ಪ್ರಜ್ಞಾವಂತ ಜನರು ಸೂಕ್ತ ಜಾಗ್ರತೆ ವಹಿಸಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಕೋರಿದರು.
100 ಹಾಸಿಗೆ ಸಾಮರ್ಥ್ಯದ ಅಂಕೋಲಾ ತಾಲ್ಲೂಕು ಆಸ್ಪತ್ರೆಯಲ್ಲಿ ಕೇವಲ 17 ಬೆಡ್ ಗಳಿಗೆ ಆಕ್ಸಿಜನ್ ವ್ಯವಸ್ಥೆ ಸಾಲದು. ಹೆಚ್ಚುತ್ತಿರುವ ಕರೊನಾ ಪಕರಣಗಳಿಂದ ಇಲ್ಲಿಯೇ ಉತ್ತಮ ಚಿಕಿತ್ಸೆ ದೊರೆಯುವಂತಾಗಲು ಮುಂಜಾಗ್ರತಾ ಕ್ರಮವಾಗಿ ಮತ್ತೆ ಹೆಚ್ಚುವರಿ 50 ಬೆಡಗಳಿಗೆ ಅನುಕೂಲವಾಗುವಂತೆ ಆಕ್ಸಿಜನ್ ಸಂಪರ್ಕ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು..
ತಾಲ್ಲೂಕು ಆಸ್ಪತ್ರೆಗೆ ಕೋವಿಡ್ ಲಸಿಕೆ ತೆಗೆದುಕೊಳ್ಳಲು ಬರುವ ಕೆಲ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಗುಂಪು ಗುಂಪಾಗಿ ಸೇರುವುದು ಮತ್ತು ಈ ಕುರಿತು ಆಸ್ಪತ್ರೆಯ ಸಿಬ್ಬಂದಿಗಳು ಸಹ ಸಾರ್ವಜನಿಕರಿಗೆ ಜಾಗ್ರತಿ ಮೂಡಿಸದಿರುವುದರಿಂದ ಸೊಂಕು ಪ್ರಸರಣದ ಅಪಾಯದ ಸಾಧ್ಯತೆಗಳಿದ್ದು , ಕೆಲವರು ವ್ಯಾಕ್ಸಿನೇಶನಗೆ ಬರಲು ಭಯಪಡುತ್ತಿದ್ದಾರೆ ಎಂಬ ಮಾಧ್ಯಮದವರ ಮಾತಿಗೆ ಧ್ವನಿಗೂಡಿಸಿದ ಜಿಲ್ಲಾಧಿಕಾರಿಗಳು, ಜನರು ಇಲ್ಲಿ ಬಂದು ಮಾರಿ ತೆಗೆದುಕೊಂಡು ಹೋಗುವಂತಾಗ ಬಾರದು ಎಂದು ನಗು ಮುಖದಲ್ಲೇ ಹೇಳಿದ್ದು,ಪಕ್ಕದಲ್ಲೇ ಇದ್ದ ಅಧಿಕಾರಿಗಳಿಗೆ ಎಚ್ಚರಿಕೆ ಸಂದೇಶ ನೀಡಿದಂತಿತ್ತು.
ಆಸ್ಪತ್ರೆಯ ಕೊವಿಡ್ ಹಾಗೂ ಇತರೆ ಜನರಲ್ ವಾರ್ಡ್, ಡಯಾಲಿಸಿಸ್ ಸೆಂಟರ್, ತುರ್ತು ಚಿಕಿತ್ಸಾ ಘಟಕ, ಅಮ್ಲಜನಕ ಘಟಕ ಮತ್ತಿತರ ಪೂರಕ ವ್ಯವಸ್ಥೆಗಳನ್ನು ಪರಿಶೀಲಿಸಿ, ಮಾಹಿತಿ ಪಡೆದು, ಸಮಾಲೋಚನೆ ನಡೆಸಿದ ಜಿಲ್ಲಾಧಿಕಾರಿಗಳು ಸಮುದಾಯ ಆರೋಗ್ಯ ಕಾಳಜಿಯಿಂದ ಸಾರ್ವಜನಿಕರು, ಮಾಧ್ಯಮದವರ ಸಹಕಾರದ ಅಗತ್ಯತೆ ಒತ್ತಿ ಹೇಳಿದರು.
ಹೆಚ್ಚುವರಿ ಪ್ರಭಾರ ತಹಶೀಲ್ದಾರ ಮಂಜುಳಾ ಭಜಂತ್ರಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶರದ್ ನಾಯಕ, ತಾಲೂಕಾ ಆರೋಗ್ಯಾಧಿಕಾರಿ ಡಾ. ನಿತಿನ್ ಹೋಸ್ಮೇಲಕರ್, ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಮಹೇಂದ್ರ ನಾಯಕ, ಡಾ.ರಮೇಶ, ಪಿಎಸೈ ಈ ಸಿ ಸಂಪತ್, ಪೋಲೀಸ್, ಕಂದಾಯ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.