ಮೃತಳ ಮಗ ಚಿಕ್ಕವ, ತಂದೆಗೆ ಸರಿಯಾಗಿ ಕಣ್ಣುಕಾಣುತ್ತಿರಲಿಲ್ಲ: ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದರು
ಕಾರವಾರ: ಮೆದುಳು ರಕ್ತಸ್ರಾವದಿಂದ ಜಿಲ್ಲಾಸ್ಪತ್ರೆಯಲ್ಲಿ ಮಹಿಳೆಯೊಬ್ಬಳು ಮೃತಪಟ್ಟಿದ್ದಳು. ಈ ವೇಳೆ ಮೃತಳ ಪತಿ ಸಂತೋಷ ನಾಯ್ಕ ಆರ್ಥಿಕವಾಗಿಯೂ ಅಸಹಾಯಕನಾಗಿದ್ದ. ಜೊತೆಗೆ ಅನಾರೋಗ್ಯದಿಂದ ಬಳಲುತ್ತಿದ್ದು, ಎರಡೂ ಕಣ್ಣುಗಳು ಸರಿಯಾಗಿ ಕಾಣುತ್ತಿರಲಿಲ್ಲ ಹಿನ್ನೆಲೆಯಲ್ಲಿ ಅಂತ್ಯಸಂಸ್ಕಾರ ಕಷ್ಟವಾಗಿತ್ತು. ಈ ವೇಳೆ ರೆಡ್ ಕ್ರಾಸ್ ವಿಪತ್ತು ನಿರ್ವಹಣಾ ಘಟಕ ನೆರವಿಗೆ ಬಂದಿದೆ.
ಹೌದು, ಕಾರವಾರ ತಾಲೂಕಿನ ಸದಾಶಿವಗಡದ ಅಲ್ಕಾ ನಾಯ್ಕ ಎಂಬ ಮಹಿಳೆಯ ಶವ ಸಂಸ್ಕಾರವನ್ನು ರೆಡ್ ಕ್ರಾಸ್ ವಿಪತ್ತು ನಿರ್ವಹಣಾ ಘಟಕದ ವತಿಯಿಂದ ದಿವೇಕರ ಕಾಲೇಜು ಎದುರಿನ ರುದ್ರಭೂಮಿಯಲ್ಲಿ ನೆರವೇರಿಸಲಾಯಿತು. ಮೃತಳ ಮಗ ಕೂಡ ಚಿಕ್ಕವನಿದ್ದು ತಾಯಿಯ ಶವ ನೋಡಲಾಗದೆ ಸಂಕಷ್ಟದಲ್ಲಿದ್ದ. ಅಂತ್ಯಸಂಸ್ಕಾರ ಮಾಡುವ ಶಕ್ತಿ ಅವರಲ್ಲಿ ಇರಲಿಲ್ಲ .
ರೆಡ್ ಕ್ರಾಸ್ ವಿಪತ್ತು ನಿರ್ವಹಣಾ ಜಿಲ್ಲಾ ಘಟಕದ ಮುಖ್ಯಸ್ಥ ಮಾಧವ ನಾಯಕ ಅವರಿಗೆ ಈ ವಿಷಯ ಗಮನಕ್ಕೆ ಬಂದಿದೆ. ಕೂಡಲೇ ಅಂತ್ಯ ಸಂಸ್ಕಾರ ನಡೆಸಲು ರೆಡ್ ಕ್ರಾಸ್ ವಿಪತ್ತು ನಿರ್ವಹಣಾ ಘಟಕದ ಪ್ರಮುಖರ ಜೊತೆ ಚರ್ಚಿಸಿ, ಒಮ್ಮತದ ನಿರ್ಣಯಕ್ಕೆ ಬರಲಾಗಿದೆ. ಎಲ್ಲರೂ ಒಪ್ಪಿದ ಬಳಿಕ ಮೃತ ಮಹಿಳೆಗೆ ಕೋವಿಡ್ ಪಾಸಿಟಿವ್ ಇಲ್ಲವೆಂಬುದನ್ನು ಖಚಿತಪಡಿಸಿಕೊಂಡು, ಅಂತ್ಯಸಂಸ್ಕಾರ ನೆರವೇರಿಸಿ, ಮಾನವೀಯತೆ ಮೆರೆಯಲಾಗಿದೆ.
ಧಾರ್ಮಿಕ ವಿಧಿವಿಧಾನದಂತೆ ಶವ ಸಂಸ್ಕಾರ ನಡೆಸಲಾಗಿದೆ. ಮೃತಳ ಪುಟ್ಟ ಮಗ ಸಾಹಿಲ್ ಕೈಯ್ಯಿಂದ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದು, ಈ ವೇಳೆ ಆಕೆಯ ಪತಿ ಸಂತೋಷ ನಾಯ್ಕ ಇದ್ದರು. ನಗರಸಭೆ ವತಿಯಿಂದ ಪೌರಾಯುಕ್ತ ಆರ್.ಪಿ.ನಾಯ್ಕ ವಾಹನ ವ್ಯವಸ್ಥೆ ಕಲ್ಪಿಸಿಕೊಟ್ಟರು. ವಲಯ ಅರಣ್ಯಾಧಿಕಾರಿ ರಾಘವೇಂದ್ರ ನಾಯ್ಕ ಶವ ದಹನಕ್ಕೆ ಕಟ್ಟಿಗೆ ವ್ಯವಸ್ಥೆಯನ್ನು ಕಲ್ಪಿಸಿದ್ದರು.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..
ವಿಸ್ಮಯ ನ್ಯೂಸ್, ಕಾರವಾರ