Info
Trending

ಅನ್ ಲಾಕ್ ಪ್ರಕ್ರಿಯೆ: ಯಾವ ಜಿಲ್ಲೆಗಳಲ್ಲಿ ಲಾಕ್ ಡೌನ್ ಮುಂದುವರಿಕೆ? ಉತ್ತರಕನ್ನಡದಲ್ಲಿ ಏನಕ್ಕೆಲ್ಲ‌ ಸಿಕ್ಕಿದೆ ಅವಕಾಶ

ಬೆಂಗಳೂರು: ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಮಂಡ್ಯ, ಮೈಸೂರು, ಹಾಸನ, ಶಿವಮೊಗ್ಗ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜೂನ್ 21 ರವರೆಗೆ ಲಾಕ್​ಡೌನ್ ಮುಂದುವರೆಯಲಿದೆ. ಈ ಕುರಿತು ಸಿಎಂ ಯಡಿಯೂರಪ್ಪ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಈ 11 ಜಿಲ್ಲೆಗಳಲ್ಲಿ ಈಗಿರುವ ಮಾರ್ಗಸೂಚಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಜೂನ್ 14ರಿಂದ ನಿರ್ಬಂಧ ಸಡಿಲಿಕೆ ಮಾಡುತ್ತೇವೆ ಎಂದು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.

ರಾಜ್ಯದಲ್ಲಿ ಜೂ. 21ರವರೆಗೆ ಪ್ರತಿದಿನ ರಾತ್ರಿ 7ರಿಂದ ಬೆಳಗ್ಗೆ 5ರವರೆಗೆ ಕೊವಿಡ್ ಕರ್ಪ್ಯೂ ಜಾರಿಯಲ್ಲಿರುತ್ತದೆ. ಅದೇ ರೀತಿ ವೀಕೆಂಡ್ ಕರ್ಫ್ಯೂ ಕೂಡ ರಾಜ್ಯದಲ್ಲಿ ಜಾರಿಯಲ್ಲಿರಲಿದೆ. ಲಾಕ್ ಸಡಿಲಿಸಿದ ಜಿಲ್ಲೆಗಳಲ್ಲಿ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಪಾರ್ಸೆಲ್ ಗೆ ಅವಕಾಶ ಇದೆ. ಬೆಳಗ್ಗೆ 10ಗಂಟೆಯವರೆಗೆ ಪಾರ್ಕ್ ಗಳು ಓಪನ್ ಇರುತ್ತವೆ.

ಎಲ್ಲ ನಿರ್ಮಾಣ ಚಟುವಟಿಗೆ ಅವಕಾಶ ನೀಡಲಾಗಿದೆ. ಅಗತ್ಯ ವಸ್ತುಗಳ ಖರೀದಿಗೆ ಮಧ್ಯಾಹ್ನ 2ಗಂಟೆವರೆಗೆ ವಿಸ್ತರಿಸಲಾಗಿದೆ. ಆಟೋ, ಟ್ಯಾಕ್ಸಿ ಯಲ್ಲಿ ಇಬ್ಬರು ಪ್ರಯಾಣಿಕರಿಗೆ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ಅಂತರ್ ಜಿಲ್ಲಾ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ. ಈ ಸಂಬಂಧ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಹೀಗಾಗಿ ಉತ್ತರಕನ್ನಡದಲ್ಲೂ ಅನ್ ಲಾಕ್ ಬಹುತೇಕ ಪಕ್ಕಾ ಆಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button