Important
Trending

ಕೋವಿಡ್ ಲಸಿಕೆ ಪಡೆದ ಒಂದು ಗಂಟೆಯ ನಂತರ ವ್ಯಕ್ತಿ ಹೃದಯಾಘಾತದಿಂದ‌ ಸಾವು: ಮನೆಯವರು,‌ ಕುಟುಂಬಸ್ಥರು ಹೇಳಿದ್ದೇನು?

ಅಂಕೋಲಾ: ಕೋವಿಡ್ ಲಸಿಕೆ ಪಡೆದ ವ್ಯಕ್ತಿಯೋರ್ವರು, ಲಸಿಕೆ ಪಡೆದ ಒಂದು ಗಂಟೆಯ ಬಳಿಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಗುರುವಾರ ತಾಲ್ಲೂಕಿನಲ್ಲಿ ನಡೆದಿದೆ. ಪಟ್ಟಣದ ಕಂತ್ರಿ ಮಾಧವ ನಗರದ ನಿವಾಸಿ ಮಹಾದೇವ ಪುತ್ತು ನಾಯ್ಕ (68) ಮೃತರು.

ಅವರು ಗುರುವಾರ ಮುಂಜಾನೆ 11 ಗಂಟೆಗೆ ಪಟ್ಟಣದ ಸತ್ಯಾಗ್ರಹ ಸ್ಮಾರಕ ಭವನದಲ್ಲಿ ಕೋವಿಡ್ ಲಸಿಕೆ ಪಡೆದಿದ್ದರು. ಆರೋಗ್ಯ ಇಲಾಖೆಯಿಂದ ಲಸಿಕೆ ವಿತರಣೆ ಶಿಬಿರ ಆಯೋಜಿಸಲಾಗಿತ್ತು.ನಂತರ ಮಧ್ಯಾಹ್ನ 12 ಗಂಟೆಗೆ ತಾಲ್ಲೂಕು ಆಸ್ಪತ್ರೆಗೆ ಮಾತ್ರೆಗಳನ್ನು ಕೊಂಡೊಯ್ಯಲು ಪತ್ನಿಯೊಂದಿಗೆ ಬಂದಿದ್ದರು ಎನ್ನಲಾಗಿದೆ.

ಈ ವೇಳೆ ನಿತ್ರಾಣಗೊಂಡಿದ್ದ ಅವರನ್ನು ಆಸ್ಪತ್ರೆಯ ತುರ್ತು ಘಟಕಕ್ಕೆ ದಾಖಲಿಸುವ ವ್ಯವಸ್ಥೆ ಮಾಡಲಾಯಿತು. ಅಷ್ಟರಲ್ಲಿಯೇ ಅವರು ಮೃತಪಟ್ಟಿದ್ದರು. ಹೃದಯಾಘಾತ ಸಂಭವಿಸಿ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕ ಪರೀಕ್ಷೆಯಿಂದ ತಿಳಿದುಬಂದಿದೆ.

ಮರಣೋತ್ತರ ಪರೀಕ್ಷೆ ನಡೆಸಿ ಸೂಕ್ತ ಕಾರಣ ತಿಳಿದುಕೊಳ್ಳುವ ಬಗ್ಗೆ ತಾಲ್ಲೂಕು ಆರೋಗ್ಯ ಅಧಿಕಾರಿಗಳು ಕುಟುಂಬಸ್ಥರಿಗೆ ತಿಳಿಸಿದರು. ಹಿಂದಿನಿಂದಲೂ ಅವರಿಗೆ ಹೃದಯದ ಸಮಸ್ಯೆಯಿದ್ದು, ಮರಣೋತ್ತರ ಪರೀಕ್ಷೆ ನಡೆಸದೆ ಶವವನ್ನು ನೀಡುವಂತೆ ಕುಟುಂಬಸ್ಥರು ಪತ್ರದ ಮೂಲಕ ಮನವಿ ಮಾಡಿದ ಹಿನ್ನೆಲೆಯಲ್ಲಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

ಮೃತರಿಗೆ ಕೋವಿಡ್ ಪರೀಕ್ಷೆ ನಡೆಸಿದ್ದು, ಸೋಂಕು ಧೃಡಪಟ್ಟಿಲ್ಲ. ತಾಲ್ಲೂಕು ಆರೋಗ್ಯ ಅಧಿಕಾರಿ ನಿತಿನ್ ಹೊಸ್ಮೇಲ್ಕರ್, ಸಿಪಿಐ ಕೃಷ್ಣಾನಂದ ನಾಯಕ, ಪಿಎಸ್ಐ ಪ್ರೇಮನ ಗೌಡ ಪಾಟೀಲ್ ಇದ್ದರು.

ವಿಸ್ಮಯ ನ್ಯೂಸ್ ವಿಲಾಸ್ ನಾಯಕ ಅಂಕೋಲಾ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888..

Back to top button