
ಅಂಕೋಲಾ ಜುಲೈ 25: ತಾಲೂಕಿನಲ್ಲಿ ರವಿವಾರ 1 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವುದರೊಂದಿಗೆ, ಒಟ್ಟು 59 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಸೋಂಕು ಮುಕ್ತರಾದ 4 ಜನರನ್ನು ಬಿಡುಗಡೆಗೊಳಿಸಲಾಗಿದೆ . ವಿವಿಧ ಆಸ್ಪತ್ರೆಗಳಲ್ಲಿ 3 ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ಲಕ್ಷಣವುಳ್ಳ 56ಜನರು ಹೋಂ ಐಸೋಲೇಶನ್ ನಲ್ಲಿದ್ದಾರೆ.
ಕೊವಿಡ್ ಲಸಿಕೆ ಪೂರೈಕೆ ವ್ಯತ್ಯಯದಿಂದ ಜುಲೈ 26 ಸೋಮವಾರ ತಾಲೂಕಿನ ಯಾವುದೇ ಪ್ರದೇಶಗಳಲ್ಲಿ ವ್ಯಾಕ್ಸಿನೇಷನ್ ಕಾರ್ಯ ನಡೆಸಲಾಗುತ್ತಿಲ್ಲ ಎಂದು ತಾಲ್ಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ








