ಕಾರವಾರ ಜುಲೈ 28: ನೂತನ ಮುಖ್ಯಮಂತ್ರಿಯಾಗಿ ಬುಧವಾರ ಬಸವರಾಜ್ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ಬೆನ್ನಿಗೆ ಪತ್ರಿಕಾಗೋಷ್ಠಿ ನಡೆಸಿರುವ ಸಿಎಂ,ನಾಳೆ ಕಾರವಾರಕ್ಕೆ ತೆರಳಿ, ನೆರೆಪೀಡಿತ ಪ್ರದೇಶಗಳ ಕುರಿತು ಮಾಹಿತಿ ಪಡೆಯಲಿದ್ದಾರೆ ಎನ್ನಾಗಿದೆ.
ಕಳೆದ ಜುಲೈ 16ರಂದು ಅಂದಿನ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ,ಕಾರವಾರಕ್ಕೆ ಆಗಮಿಸಿ ಆಸ್ಪತ್ರೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವವರಿದ್ದರು. ಅದೇ ದಿನ ನಿಗದಿಯಾಗಿದ್ದ ಪ್ರಧಾನ ಮಂತ್ರಿಗಳ ವಿಡಿಯೋ ಸಂವಾದ,ಜಿಲ್ಲೆಯ ಹವಾಮಾನ ವೈಪರೀತ್ಯ ಮತ್ತಿತರ ಕಾರಣಗಳಿಂದ ಭೇಟ ಮುಂದೂಡಲ್ಪಟ್ಟಿತ್ತು.
ತದನಂತರ ಬೆಳಗಾವಿಗೆ ಆಗಮಿಸಿದ್ದ ಬಿಎಸ್ ವೈ ,ಜುಲೈ 26ರಂದು ಸಾಧ್ಯವಾದರೆ ಕಾರವಾರಕ್ಕೆ ತೆರಳಿ ನೆರೆ ಹಾನಿ ಪ್ರದೇಶಗಳಿಗೆ ಭೇಟಿ ನೀಡುವ ಇಂಗಿತ ವ್ಯಕ್ತಪಡಿಸಿದ್ದರು. ಬದಲಾದ ರಾಜಕೀಯ ಹಿನ್ನೆಲೆಯಲ್ಲಿ,ಅದೇ ದಿನ ಯಡಿಯೂರಪ್ಪ ರಾಜೀನಾಮೆ ನೀಡಿ ಮಾಜಿ ಮುಖ್ಯಮಂತ್ರಿಯಾಗಿದ್ದಾರೆ. ಇದರಿಂದ ನಾಡದೊರೆಯ ನಿರೀಕ್ಷೆಯಲ್ಲಿದ್ದ ಹಲವರಿಗೆ ನಿರಾಸೆಯಾಗಿತ್ತು.
ನೂತನ ಮುಖ್ಯಮಂತ್ರಿಯಾದ ಬಸವರಾಜ್ ಬೊಮ್ಮಾಯಿ,ಆರಂಭದಲ್ಲಿಯೇ ಕಾರವಾರಕ್ಕೆ ಆಗಮಿಸುತ್ತಿರುವುದು ಸ್ಥಳೀಯ ಶಾಸಕಿ ರೂಪಾಲಿ ನಾಯ್ಕ ಮತ್ತು ಜಿಲ್ಲೆಯ ಜನತೆಯಲ್ಲಿ ಹೊಸ ಭರವಸೆ ಮೂಡಿಸಿದೆ. ಮಾಜಿ ಮುಖ್ಯಮಂತ್ರಿ ಎಸ್ಆರ್ ಬೊಮ್ಮಾಯಿ ಸುಪುತ್ರ ಅಪಾರ ರಾಜಕೀಯ ಅನುಭವ ಹೊಂದಿದ್ದು,ತಮ್ಮ ಅಧಿಕಾರವಧಿಯಲ್ಲಿ ಜಿಲ್ಲೆಯ ಹಾಗೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುವಂತೆ ಆಗಲಿ ಎಂದು ಆಶಿಸಿ ,ಜನತೆಯ ಪರವಾಗಿ ಜಿಲ್ಲೆಯ ಜನತೆ ಪರವಾಗಿ ಹೃತ್ಪೂರ್ವಕ ಸ್ವಾಗತ ಕೋರೋಣ
ವಿಸ್ಮಯ ನ್ಯೂಸ ವಿಲಾಸ ನಾಯಕ ಅಂಕೋಲಾ
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.