Important
Trending

ಉತ್ತರಕನ್ನಡದ ನೆರೆಹಾವಳಿ ಪ್ರದೇಶಕ್ಕೆ ಭೇಟಿ ನೀಡಿದ ಸಿಎಂ: ಅರಬೈಲ್ ಘಟ್ಟದಲ್ಲಿನ ಭೂಕುಸಿತ ವೀಕ್ಷಣೆ: ಕಳಚೆ, ಶಿರೂರು ಗ್ರಾಮಕ್ಕೂ ಭೇಟಿ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ಅಂಕೋಲಾ ತಾಲ್ಲೂಕುಗಳಲ್ಲಿ ನೆರೆಹಾನಿಗೊಳಗಾದ ಪ್ರದೇಶಗಳಿಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಿದರು. 1:30ರ ವೇಳೆಗೆ ಯಲ್ಲಾಪುರ ತಾಲ್ಲೂಕು ಆಸ್ಪತ್ರೆಗೆ ಆಗಮಿಸಿದ ಸಿಎಂಗೆ ಪೊಲೀಸರು ಗೌರವ ವಂದನೆಯನ್ನ ಸಲ್ಲಿಸಿದರು. ಬಳಿಕ ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಯಾಲಿಸಿಸ್ ಕೇಂದ್ರವನ್ನ ಉದ್ಘಾಟಿಸಿದರು. ಅಲ್ಲಿಂದ ತಾಲ್ಲೂಕಿನ ಕಳಚೆ ಗ್ರಾಮದಲ್ಲಿ ಉಂಟಾಗಿದ್ದ ನೆರೆ ಹಾನಿ ಪ್ರದೇಶಕ್ಕೆ ಭೇಟಿ ನೀಡಿ ಸಂತ್ರಸ್ಥರಿಗೆ ಧೈರ್ಯ ತುಂಬಿದರು.

ನಂತರ ರಾಷ್ಟ್ರೀಯ ಹೆದ್ದಾರಿ 63ರ ಅರಬೈಲ್ ಘಟ್ಟದಲ್ಲಿ ಉಂಟಾಗಿರುವ ಭೂಕುಸಿತ ಪ್ರದೇಶವನ್ನು ವೀಕ್ಷಣೆ ಮಾಡಿದರು. ಜುಲೈ 23ರಂದು ಸುರಿದ ಧಾರಾಕಾರ ಮಳೆಗೆ ಘಟ್ಟ ಪ್ರದೇಶದ ಹತ್ತಕ್ಕೂ ಅಧಿಕ ಪ್ರದೇಶದಲ್ಲಿ ಭೂಕುಸಿತ ಉಂಟಾಗಿತ್ತು. ಈಗಾಗಲೇ ಕುಸಿತವಾಗಿರುವ ಪ್ರದೇಶಗಳಲ್ಲಿ ತೆರವು ಕಾರ್ಯವನ್ನ ಕೈಗೊಳ್ಳಲಾಗಿದ್ದು ಶಾಶ್ವತ ಕಾಮಗಾರಿ ನಡೆಸಲು ಸುಮಾರು 70 ಕೋಟಿಗೂ ಅಧಿಕ ಮೊತ್ತಕ್ಕೆ ಹೆದ್ದಾರಿ ಪ್ರಾಧಿಕಾರ ಬೇಡಿಕೆ ಇಟ್ಟಿದೆ. ನಂತರ ಗುಳ್ಳಾಪುರ ಗ್ರಾಮದಲ್ಲಿ ನೆರೆಯಿಂದ ಕುಸಿದುಬಿದ್ದ ಸೇತುವೆ ಪ್ರದೇಶಕ್ಕೆ ಸಿಎಂ ಭೇಟಿ ನೀಡಿ ಪರಿಶೀಲಿಸಿದರು.

ಅಂಕೋಲಾ ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ 63 ರ ಅರಬೈಲ್ ಘಟ್ಟದಲ್ಲಿ ಕುಸಿದ ಗುಡ್ಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಶೀಲನೆ ನಡೆಸಿದರು. ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಉತ್ತರಕನ್ನಡಕ್ಕೆ ಆಗಮಿಸಿದ ಅವರು ಯಲ್ಲಾಪುರದ ಕಳಚೆ ಗ್ರಾಮದಲ್ಲಿ ಗುಡ್ಡ ಕುಸಿತ ಪ್ರದೇಶಕ್ಕೆ ತೆರಳಿ ವೀಕ್ಷಣೆ ನಡೆಸಿ ಸ್ಥಳೀಯರಿಂದ ಮಾಹಿತಿ ಪಡೆದ ಅವರು ಬಳಿಕ ಅಂಕೋಲಾಗೆ ತೆರಳುವಾಗ ಮಾರ್ಗ ಮಧ್ಯೆದಲ್ಲಿ ಹೆದ್ದಾರಿಯಲ್ಲಿ ಕುಸಿತವಾದ ಪ್ರದೇಶಗಳ ವೀಕ್ಷಣೆ ನಡೆಸಿದರು.

ಅಂಕೋಲಾ ತಾಲೂಕಿನ ನೆರೆಪೀಡಿತ ಶಿರೂರು ಗ್ರಾಮಕ್ಕೆ ಭೇಟಿ ಕೊಟ್ಟು, ಕಾಳಜಿ ಕೇಂದ್ರದಲ್ಲಿರುವ ನೋವು ಆಲಿಸಿದರು. ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಪ್ರಕೃತಿ ವಿಕೋಪ ಮತ್ತು ಪರಿಹಾರ ಕುರಿತು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳೊಂದಿಗೆ ಜಿಲ್ಲಾಮಟ್ಟದ ಸಮಾಲೋಚನೆ ಸಭೆ ನಡೆಸಿದರು.

ವಿಸ್ಮಯ ನ್ಯೂಸ್, ಕಾರವಾರ

ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.

Back to top button