Big News | ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವಂತಿಲ್ಲ| ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಹೀಗಿದೆ ನೋಡಿ
ಗೌರಿ ಗಣೇಶ ಹಬ್ಬ, ಮೊಹರಂ ಸೇರಿದಂತೆ ಧಾರ್ಮಿಕ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟ ಮಾಡಿ ಇಂದು ಸರ್ಕಾರ ಆದೇಶ ಹೊರಡಿಸಿದೆ. ಜನದಟ್ಟಣೆ ತಡೆಗಟ್ಟಿ, ಕೋವಿಡ್ ನಿಯಂತ್ರಿಸುವ ಉದ್ದೇಶದಿಂದ ಕೆಲ ನಿರ್ಬಂಧಗಳನ್ನು ಜಾರಿ ಮಾಡಲಾಗಿದೆ.
ಸರಳವಾಗಿ ದೇವಸ್ಥಾನದೊಳಗೆ ಆಚರಿಸುವುದು. ದೇವಸ್ಥಾನ ಹೊರತುಪಡಿಸಿ ಸಾರ್ವಜನಿಕ ಸ್ಥಳಗಳಲ್ಲಿ, ಹೊರಾಂಗಣಗಳಲ್ಲಿ ಗೌರಿ-ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡುವಂತಿಲ್ಲ.
ಗಣೇಶ ಮೂರ್ತಿಗಳನ್ನು ತರುವಾಗ ಹಾಗೂ ವಿಸರ್ಜಿಸುವಾಗ ಯಾವುದೇ ರೀತಿಯ ಮೆರವಣಿಗೆ, ಮನೋರಂಜನಾ ಕಾರ್ಯಕ್ರಮ ಆಯೋಜಿಸುವಂತಿಲ್ಲ.
ಪಾರಂಪರಿಕ ಗೌರಿ ಗಣೇಶ ಮೂರ್ತಿಯನ್ನು ಪೂಜಿಸುವುದು ಮತ್ತು ಅವುಗಳನ್ನು ಮನೆಯಲ್ಲಿಯೇ ವಿಸರ್ಜಿಸಬೇಕು.. ಅಥವಾ ಸಮೀಪದ ಜಿಲ್ಲಾಡಳಿತ ಸೂಚಿಸಿದಂತ ಸ್ಥಳಗಳಲ್ಲಿ ವಿಸರ್ಜಿಸುವುದು.
ಮಾರ್ಗಸೂಚಿ ಹೀಗಿದೆ ನೋಡಿ
ಸಾರ್ವಜನಿಕ ದರ್ಶನಕ್ಕಾಗಿ ಆಗಮಿಸುವ ಭಕ್ತಾಧಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡುವುದು ಕಡ್ಡಾಯ ಮಾಡಲಾಗಿದೆ. ಇದರ ಜೊತೆಗೆ ಹಬ್ಬ ಆಚರಣೆಮಾಡಲು ಸ್ಥಳೀಯ ಜಿಲ್ಲಾಡಳಿತ, ಪೋಲೀಸ್ ಇಲಾಖೆ ಹೊರಡಿಸುವಂತ ಆದೇಶ ಪಾಲಿಸುವುದು ಎಂದು ಸೂಚಿಸಲಾಗಿದೆ.
ಶ್ರೀ ವರಾಹಸ್ವಾಮಿ ಜ್ಯೋತಿಷ್ಯ ಪೀಠಂ”ಪ್ರಧಾನ ತಾಂತ್ರಿಕ್ : ಶ್ರೀ ದೇವದತ್ತ ಪಣಿಕರ್ ( ಕೇರಳ ) ಮೊಬೈಲ್ : 9964108888 FAMOUS ASTROLOGER
ಫೋನಿನಲ್ಲಿ ಪ್ರಶ್ನೆ ,ಫೋನಿನಲ್ಲಿ ಉತ್ತರ , ಫೋನಿನಲ್ಲಿ ಪರಿಹಾರ, ನಿಮ್ಮ ಜೀವನದ ಯಾವುದೇ ಕಷ್ಟ ಸಂಕಷ್ಟಗಳಿದ್ದರೂ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ,ಅತ್ತೆ ಸೊಸೆ ಜಗಳ,ಸಂತಾನ,ಆರೋಗ್ಯ ತೊಂದರೆ, ಸ್ತ್ರೀಯರ ಗುಪ್ತ ಸಮಸ್ಯೆ,ಗಂಡ-ಹೆಂಡತಿಯ ಕಲಹ, ನಿಮ್ಮ ಗಂಡ ಪರಸ್ತ್ರೀಯರ ವ್ಯಾಮೋಹ, ವಶೀಕರಣ ಮತ್ತು ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಕೇರಳದ ಪೂಜಾ ವಿಧಿವಿಧಾನದಿಂದ ಕೇವಲ 3 ದಿನದಲ್ಲಿ ಪರಿಹಾರ ಶತಸಿದ್ಧ ಮೊಬೈಲ್ : 9964108888.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್