ನಾಟಾ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ನಡುರಸ್ತೆಯಲ್ಲೇ ಪಲ್ಟಿ: ಚಾಲಕ,ಕ್ಲೀನರ್ ಅಪಾಯದಿಂದ ಪಾರು
ಯಲ್ಲಾಪುರ: ನಾಟಾ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಆರತಿಬೈಲ್ ಘಟ್ಟದಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಲಾರಿ ಜಖಂಗೊಂಡಿದ್ದು, ಲಾರಿಯಲ್ಲಿ ಇದ್ದ ನಾಟಾಗಳೆಲ್ಲಾ ಚೆಲ್ಲಾಪಿಲ್ಲಿಯಾಗಿ ರಸ್ತೆ ಮೇಲೆ ಬಿದ್ದಿವೆ.
ಯಲ್ಲಾಪುರ ಕಡೆಯಿಂದ ಅಂಕೋಲಾ ಕಡೆಗೆ ನಾಟಾ ತುಂಬಿಕೊಂಡು ಹೊರಟಿದ್ದ ಲಾರಿ, ಆರತಿಬೈಲ್ ಘಟ್ಟದ ಅಪಾಯಕಾರಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿಯಲ್ಲಿದ್ದ ಚಾಲಕ,ಕ್ಲೀನರ್ ಇಬ್ಬರೂ ಅಪಾಯದಿಂದಪಾರಾಗಿದ್ದಾರೆ.
ಹೆದ್ದಾರಿ ನಡುವೆಯೇ ಲಾರಿ ಪಲ್ಟಿಯಾಗಿದ್ದರಿಂದ ಸುಮಾರು ಎರಡು ತಾಸುಗಳ ಕಾಲ ವಾಹನಗಳ ಸಂಚಾರಕ್ಕೆ ಅಡೆತಡೆ ಉಂಟಾಗಿತ್ತು. ಪೊಲೀಸರು ಸ್ಥಳಕ್ಕೆ ಆಗಮಿಸಿ ಸುಗಮ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಟ್ಟರು.
ವಿಸ್ಮಯ ನ್ಯೂಸ್ ಯಲ್ಲಾಪುರ
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581