ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ಕಾನೂನು ಮತ್ತು ಸುವ್ಯವಸ್ಥೆ: ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ
ಕಾರವಾರ: ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಜಾರಿಗೊಳಿಸಿಲಾಗಿದೆ. ಆದರೆ ಹೆಚ್ಚು ಅರಣ್ಯ ಪ್ರದೇಶವನ್ನು ಹೊಂದಿರುವ ಉತ್ತರಕನ್ನಡ, ದಕ್ಷಿಣ ಕನ್ನಡಗಳಂತಹ ಜಿಲ್ಲೆಗಳಲ್ಲಿ ಈ ವ್ಯವಸ್ಥೆ ಕಷ್ಟವಾದರೂ ಕೂಡ ಸರ್ಕಾರ ಗಂಭೀರವಾಗಿ ಪರಿಗಣಿಸಿ ಸುರಕ್ಷತೆ ಒದಗಿಸಲು ಕ್ರಮ ಕೈಗೊಳ್ಳಲಿದೆ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಕಾರವಾರದಲ್ಲಿ ಈ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ನೀಡಿದ ಅವರು, ಹೆಣ್ಣುಮಕ್ಕಳ ಸುರಕ್ಷತೆಯ ದೃಷ್ಠಿಯಿಂದ ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಜಾರಿಗೊಳಿಸಿಲಾಗಿದೆ. ಎಲ್ಲೆಲ್ಲಿ ಹೆಣ್ಣುಮಕ್ಕಳು ನಿಂತುಕೊಳ್ಳುತ್ತಾರೆ, ಬಸ್‌ಗೆ ಕಾಯುತ್ತಿರುತ್ತಾರೆ ಎಂದು ತಿಳಿಯಲು ಡಿಜಿಟಲೈಸ್ಡ್ ವ್ಯವಸ್ಥೆ ಮಾಡಿದ್ದೇವೆ. ಈ ವ್ಯವಸ್ಥೆಯನ್ನು ಬೆಂಗಳೂರು ಹಾಗೂ ತುಮಕೂರಿನಲ್ಲಿ ಸದ್ಯ ಅಳವಡಿಸಲಾಗಿದೆ. ಮೈಸೂರು, ತುಮಕೂರು ಘಟನೆ ನಡೆದ ಬಳಿಕ ಹೆಚ್ಚಿನ ಪೊಲೀಸ್ ಕಚೇರಿಗಳಲ್ಲಿ ಕ್ರಮಕ್ಕೆ ಆದೇಶ ಮಾಡಲಾಗಿದೆ ಎಂದರು.
ಹೆಣ್ಣುಮಕ್ಕಳು ಒಂಟಿಯಾಗಿ ಹೋಗಿ ಬರುವ ಪ್ರದೇಶಗಳಲ್ಲಿ ಸಿಸಿಕ್ಯಾಮೆರಾ, ಸೆಕ್ಯೂರಿಟಿ ಹೆಚ್ಚಿನ ಪ್ರಮಾಣದಲ್ಲಿ ಪೂರೈಸಲು ಚರ್ಚೆ ಮಾಡಲಾಗುತ್ತಿದೆ ಎಂದರು.
ಆದರೆ ಕೆಲವೊಂದು ಗ್ರಾಮಾಂತರ ಸೂಕ್ಷ್ಮ ಪ್ರದೇಶಗಳಲ್ಲಿ ಸುರಕ್ಷತೆ ಒದಗಿಸಲು ಕಷ್ಟವಾಗುತ್ತೆ. ಸರಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಸುರಕ್ಷತೆ ಒದಗಿಸುತ್ತದೆ. ಉತ್ತರಕನ್ನಡ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲೇ ಅರಣ್ಯಭಾಗಗಳು ಹೆಚ್ಚಾಗಿದ್ದು, ಈ ಕಾರಣದಿಂದ ಅಲ್ಲಲ್ಲಿ ಹೆಚ್ಚು ಗಮನ ಹರಿಸಬೇಕಾಗುತ್ತದೆ.
ಹೆಣ್ಣುಮಕ್ಕಳು ಎಲ್ಲಿ ಹೋಗ್ತಾರೆ ಬರ್ತಾರೆ ಎಂದು ನೋಡಿಕೊಳ್ಳಬೇಕಾಗುತ್ತದೆ. ಒಳ ಪ್ರದೇಶಗಳಲ್ಲಿ ಯಾವಾಗ ಏನು ಆಗುತ್ತದೆ ಎಂದು ಹೇಳಲಾಗುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.
ಇನ್ನು ಕಲ್ಬುರ್ಗಿ ಮಹಾನಗರ ಪಾಲಿಕೆಯ ಫಲಿತಾಂಶದ ಬಗ್ಗೆ ನಾನು ಹೇಗೆ ಹೇಳಲು ಸಾಧ್ಯ.? ಅದನ್ನು ಪಕ್ಷ ನಿರ್ಧರಿಸುತ್ತದೆ. ಸಂಗ್ರಹಿತ ತೀರ್ಮಾನವಾಗೋ ಮೊದಲೇ ಮಾತನಾಡಬಾರದು. ನಾನು ಈ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದು ಮಾಧುಸ್ವಾಮಿ ಹೇಳಿದ್ದಾರೆ.
ಉತ್ತರಕನ್ನಡ ಜಿಲ್ಲೆಗೆ ಈ ಹಿಂದೆಯೇ ಬರಬೇಕಿತ್ತು, ಆದರೆ ಉಸ್ತುವಾರಿ ಸಚಿವರು ಆಹ್ವಾನಿಸಿದಾಗ ಬ್ಯುಸಿ ಇದ್ದಿದ್ದರಿಂದ ಇಂದು ಭೇಟಿ ನೀಡಿದ್ದೇನೆ. ಆದರೆ, ಉಸ್ತುವಾರಿ ಸಚಿವರು ಇಂದು ಬ್ಯುಸಿಯಾಗಿಬಿಟ್ಟಿದ್ದಾರೆ ಎಂದರು.
ವಿಸ್ಮಯ ನ್ಯೂಸ್ ಕಾರವಾರ