Important
Trending

ಮನೆಯಿಂದ ತಪ್ಪಿಸಿಕೊಂಡು ರಸ್ತೆಯಲ್ಲಿ ಅಲೆದಾಡುತ್ತಿತ್ತು ಮಗು: ಪಾಲಕರನ್ನು ಪತ್ತೆ ಹಚ್ಚಿ ಮಗುವನ್ನು ಪಾಲಕರಿಗೆ ಹಸ್ತಾಂತರಿಸಿದ ಪೊಲೀಸರು

ಗಾಂಧಿನಗರದಲ್ಲಿ ಮಗುವೊಂದು ಒಬ್ಬಂಟಿಯಾಗಿ ರಸ್ತೆಯಲ್ಲಿ ತಿರುಗಾಡುತ್ತಿತ್ತು. ಇದನ್ನು ಗಮನಿಸಿದ ಸ್ಥಳೀಯರು, ಮಗು ಎಲ್ಲಿಂದಲೋ ತಪ್ಪಿಸಿಕೊಂಡು ಬಂದಿದೆ. ಅಪರಿಚಿತ ಮಗುವಿನಂತೆ ಕಾಣುತ್ತಿದೆ ಎಂದು ಪೊಲೀಸರಿಗೆ ಮಾಹಿತಿ ನೀಡಿದ್ದರು.

ದಾಂಡೇಲಿ: ಏಳು ವರ್ಷದ ಮಗುವೊಂದು ಮನೆಯಿಂದ ತಪ್ಪಿಸಿಕೊಂಡು ತಾಲೂಕಿನಲ್ಲಿ ಅಲೆದಾಡುತ್ತಿತ್ತು. ಈ ವೇಳೆ ಪೊಲೀಸರು ಮಗುವಿನ ಪಾಲಕರನ್ನು ಗಂಟೆಯೊಳಗೆ ಪತ್ತೆ ಹಚ್ಚಿ, ಮಗುವನ್ನು ಪಾಲಕರಿಗೆ ಹಸ್ತಾಂತರಿಸಿದ್ದಾರೆ. ಗಾಂಧಿನಗರದಲ್ಲಿ ಮಗುವೊಂದು ಒಬ್ಬಂಟಿಯಾಗಿ ರಸ್ತೆಯಲ್ಲಿ ತಿರುಗಾಡುತ್ತಿತ್ತು. ಈ ಸಂಬಂಧ ಬೀಟ್ ಪೊಲೀಸರಿಗೆ ಮಾಹಿತಿ ಬಂದಿತ್ತು.

ಮಾಹಿತಿ ತಿಳಿದ ತಕ್ಷಣವೇ ಬೈಕನ್ನೇರಿ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮಗುವಿನ ಬಗ್ಗೆ ಸ್ಥಳೀಯರಲ್ಲಿ ವಿಚಾರಿಸಿದ್ದಾರೆ. ಆದರೂ ಸರಿಯಾದ ಮಾಹಿತಿ ಸಿಗಲಿಲ್ಲ. ಹೀಗಾಗಿ ಪಿಎಸ್‍ಐ ಸೂಚನೆಯಂತೆ ನಗರ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.

ಈ ವೇಳೆ ಪಾಲಕರ ಪತ್ತೆಗೆ ಮಗುವಿನ ಫೋಟೋವನ್ನು ಎಲ್ಲ ಬೀಟ್‍ಗಳ ಪೊಲೀಸರ ವಾಟ್ಸಪ್ ಗ್ರೂಪಿನಲ್ಲಿ ಹಂಚಿಕೊಳ್ಳಾಗಿದೆ. ಇದಾಗಿ ಸ್ವಲ್ಪ ಹೊತ್ತಿನಲ್ಲಿಯೇ ಮಗುವಿನ ಪಾಲಕರಾದ ಗಾಂಧಿನಗರ ಆಶ್ರಯ ಕಾಲೋನಿಯ ಮಹಮ್ಮದ್ ರಫೀಕ್ ಅವರು ಪತ್ನಿ ಸಮೇತ ಠಾಣೆಗೆ ಬಂದು ಮಗುವನ್ನು ಸ್ವೀಕರಿಸಿದ್ದಾರೆ. ಮಗು ಬುದ್ಧಿಮಾಂದ್ಯವಾಗಿದ್ದರಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೊಲೀಸರ ಕಾರ್ಯವೈಖರಿಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ಕೇಳಿಬಂದಿದೆ.

ವಿಸ್ಮಯ ನ್ಯೂಸ್, ಕಾರವಾರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button