ಯಲ್ಲಾಪುರ: ಚಾಲಕರ ನಿರ್ಲಕ್ಷತನದಿಂದಾಗಿ ಬಸ್ ಮತ್ತು ಲಾರಿಯ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ವೇಳೆ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ 9 ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63 ರ ಅರಬೈಲ್ ಘಟ್ಟದಲ್ಲಿ ನಡೆದಿದೆ. ಗಾಯಗೊಂಡ 9 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆಗೆ ಘಟ್ಟದ ಇಳಿಜಾರಿನಲ್ಲಿ ಅತೀ ವೇಗ ಮತ್ತು ನಿರ್ಲಕ್ಷತೆಯಿಂದ ಚಲಾಯಿಸಿಕೊಂಡು ಬಂದ ಲಾರಿ, ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ತಪ್ಪು ಬದಿಯಲ್ಲಿ ಚಲಿಸುತ್ತಿದ್ದ ಕಾರವಾರ-ಹುಬ್ಬಳ್ಳಿ ಬಸ್‍ಗೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಅಪಘಾತಕ್ಕೆ ಎರಡೂ ಚಾಲಕರ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ.
ಈ ಕುರಿತು ಲಾರಿ ಚಾಲಕ ಕಾಂಶಿರಾಮ ಲಕ್ಷ್ಮಣ ರಾಠೋಡ ಹಾಗೂ ಕಾರವಾರ ಬಸ್ ಡಿಪೋದ ಚಾಲಕ ಮಡಿವಾಳಪ್ಪ ಗೌಡ ಬಿರಾದಾರ ಇವರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವಿಸ್ಮಯ ನ್ಯೂಸ್, ಯಲ್ಲಾಪುರ
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581