
ಕಾರವಾರ: ಸ್ನೇಹಿತರ ಜೊತೆಗೆ ಪಿಕ್ ನಿಕ್ ಗೆ ಹೋದ ವೇಳೆ ಹಳ್ಳದಲ್ಲಿ ಕಾಲು ಜಾರಿ ಬಿದ್ದು ನೌಕಾನೆಲೆ ಸಿಬ್ಬಂದಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. 20 ಸ್ನೇಹಿತರು, ಪಿಕ್ ನಿಕ್ ಗಾಗಿ ಶಿರ್ವೆ ಬಳಿ ತೆರಳಿದ್ದರು.
ಈ ವೇಳೆ ಊಟ ಮಾಡಿ ಕೈತೊಳೆಯಲು ಹಳ್ಳದ ಬಳಿ ತೆರಳಿದ್ದಾಗ, ಆಕಸ್ಮಿಕವಾಗಿ ಕಾಲು ಜಾರಿ ಹಳ್ಳಕ್ಕೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮೂಲತಃ ದೇವಳಮಕ್ಕಿನಿವಾಸಿ ಕೃಷ್ಣಶಂಕರ್ ನಾಯ್ಕ (35) ನೀರಿನಲ್ಲಿ ಬಿದ್ದು ಮೃತಪಟ್ಟ ದುರ್ದೈವಿ. ಈ ಘಟನೆ ನಡೆದಿರೋದು ದೇವಳಮಕ್ಕಿಗ್ರಾಮದ ಶಿರ್ವೆ ಬಳಿ..

ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ಅಣ್ಣ ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ವಿಸ್ಮಯ ನ್ಯೂಸ್ ಕಾರವಾರ
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581
