ಶಿರಸಿ: ಮಾರಿಕಾಂಬಾ ದೇವಿಯ ಸನ್ನಿಧಿಯಲ್ಲಿ ನಡೆಯಬೇಕಿದ್ದ ನವರಾತ್ರಿಯ ಸಾಂಸ್ಕೃತಿಕ ಉತ್ಸವ ಸಡಗರವನ್ನು ಕಳೆದ ವರ್ಷ ಕೋವಿಡ್ ಕಸಿದಿತ್ತು. ಆದರೆ, ಈ ಬಾರಿಗೈ ಸರಳ ಉತ್ಸವ ಆಚರಣೆಗೆ ಆಡಳಿತ ಮಂಡಳಿ ಮುಂದಾಗಿದೆ. ಅಕ್ಟೋಬರ್ 7 ರಿಂದ 15ರ ವರೆಗೆ ನಡೆಯಲಿರುವ ನವರಾತ್ರಿ ಪ್ರಯುಕ್ತ ದೇವಸ್ಥಾನದಲ್ಲಿ ಸರಳ ಧಾರ್ಮಿಕ ಆಚರಣೆಗೆ ನಿರ್ಧರಿಸಲಾಗಿದೆ. ಪಾರಾಯಣ ಸೇರಿದಂತೆ ವಿವಿಧ ಸೇವೆಗಳು ನಡೆಯಲಿವೆ.
ಆದರೆ, ದೇವಿ ಸನ್ನಿಧಿಯಲ್ಲಿ ನಡೆಯಬೇಕಿದ್ದ ನೃತ್ಯ, ಗಾಯನ, ವಾದನ ಮುಂತಾದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸದಿರಲು ಧರ್ಮದರ್ಶಿ ಮಂಡಳಿ ನಿರ್ಧರಿಸಿದೆ. ಉತ್ಸವದ ವೇಳೆ ನಡೆಯುತ್ತಿದ್ದ ಸ್ಪರ್ಧೆಗಳನ್ನು ಕೈಬಿಡಲಾಗಿದೆ. ಸರಳ ರೀತಿಯಲ್ಲಿ ಉತ್ಸವ ಆಚರಿಸಿ ಎಂದು ಜಿಲ್ಲಾಧಿಕಾರಿ ಪತ್ರದ ಮೂಲಕ ಸೂಚಿಸಿದ್ದಕ್ಕೆ ವಿಜೃಂಭಣೆಯ ಆಚರಣೆ ಮಾಡುತ್ತಿಲ್ಲ ಎಂದು ದೇವಸ್ಥಾನದ ಬಾಬುದಾರರೊಬ್ಬರು ವಿಸ್ಮಯ ಟಿ.ವಿಗೆ ಮಾಹಿತಿ ನೀಡಿದ್ದಾರೆ.
ವಿಸ್ಮಯ ನ್ಯೂಸ್ ಶಿರಸಿ
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581