ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಯೋಧರ 2,100 ಕಿಮೀ ಸೈಕಲ್ ಜಾಥಕ್ಕೆ ಶಾಸಕ ಸುನೀಲ್ ಚಾಲನೆ: ಜಾಥಕ್ಕೆ ಚಾಲನೆ ನೀಡಿದ ರಾಜ್ಯದ ಮೊದಲ ಶಾಸಕ ಎಂಬ ಹೆಗ್ಗಳಿಕೆ
ಭಟ್ಕಳ: ರಾಷ್ಟ್ರೀಯ ಏಕತಾ ದಿವಸದ ಅಂಗವಾಗಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಯೋಧರ ತಂಡವು ಹಮ್ಮಿಕೊಂಡಿದ್ದ ಸೈಕಲ್ ಜಾಥವನ್ನು ಮುರ್ಡೇಶ್ವರದಲ್ಲಿ ಶಾಸಕ ಸುನೀಲ ನಾಯ್ಕ ಚಾಲನೆ ನೀಡಿದ್ದಾರೆ ‘ಏಕ್ ಭಾರತ್ ಶ್ರೇಷ್ಠ್ ಭಾರತ್’ ಎಂಬ ಘೋಷಣೆಯೊಂದಿಗೆ ಗುಜರಾತ್ ನಲ್ಲಿರವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಕಂಚಿನ ಪ್ರತಿಮೆಯವರೆಗೆ ಕೈಗಾರಿಕಾ ಭದ್ರತಾ ಪಡೆ ಯೋಧರು, 2100 ಕಿಮಿ ಸೈಕಲ್ ಜಾಥವನ್ನು ಹಮ್ಮಿಕೊಂಡಿದ್ದು, ಮುರುಡೇಶ್ವರದಿಂದ ಗುಜರಾತ್ ವರೆಗೆನ ಈ ಸೈಕಲ್ ಜಾಥಕ್ಕೆ ಸುನೀಲ ನಾಯ್ಕ ಚಾಲನೆ ನೀಡಿದ್ದಾರೆ.
ರಾಜ್ಯದಲೇ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿರುವ ಪ್ರಥಮ ಶಾಸಕರು ಎಂಬ ಹೆಗ್ಗಳಿಕೆಗೆ ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಸುನೀಲ ನಾಯ್ಕ ಪಾತ್ರರಾಗಿದ್ದಾರೆ . ಈ ವೇಳೆ ಮಾನನಾಡಿದ ಶಾಸಕ ಸುನೀಲ ನಾಯ್ಕ ದೇಶದ ಯೋಧರು ನಡೆಸುತ್ತಿರುವ ಈ ಸೈಕಲ್ ಜಾಥಾ ಮಹತ್ವಪೂರ್ಣವಾಗಿದ್ದು, ಕಾರ್ಯಕ್ರಮದ ಚಾಲನೆಗೆ ನನಗೆ ಅವಕಾಶ ಕಲ್ಪಿಸಿಕೊಟ್ಟ ಈ ಅಧಿಕಾರಿಗಳಿಗೆ ಧನ್ಯವಾದ ತಿಳಿಸುದರೊಂದಿಗೆ., 2100 ಕಿ.ಮೀ ಸೈಕಲ್ ಜಾಥದಲ್ಲಿ ಪ್ರಯಾಣಿಸುವ ಯೋಧರು ಸುರಕ್ಷಿತವಾಗಿ ಪ್ರಯಾಣ ಬೆಳಸಿ ತಮ್ಮ ಗುರಿ ತಲುಪಲಿ ಎಂದರು.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581