Uttara Kannada
Trending

ಯಾವುದೇ ಫಲಾಪೇಕ್ಷ ಇಲ್ಲದೆ ಯಶಸ್ವಿಯಾಗಿ 300 ಕ್ಕಿಂತ ಹೆಚ್ಚು ಹೆರಿಗೆ ಮಾಡಿಸಿದ ಸಾಧಕಿ ಮಹಿಳೆಗೆ ರಾಜ್ಯ ಸರ್ಕಾರದ ಮಹರ್ಷಿ ವಾಲ್ಮೀಕಿ ಪ್ರಶಸ್ತಿ

ಯಲ್ಲಾಪುರ:ಸಮಾಜ ಸೇವೆ ಹಾಗೂ ವಿವಿಧ ರಂಗದಲ್ಲಿ ನಿಸ್ವಾರ್ಥವಾಗಿ ಸೇವೆ ಸಲ್ಲಿಸುತ್ತಿರುವ ಸಾಧಕರಿಗೆ ರಾಜ್ಯ ಸರಕಾರವು ಕೊಡಮಾಡುವ ” ಮಹರ್ಷಿ ವಾಲ್ಮೀಕಿ ಪ್ರಶಸ್ತಿ ” ಗೆ ಲಕ್ಷ್ಮಿ ಸಿದ್ದಿ ಅವರು ಆಯ್ಕೆಯಾಗಿದ್ದಾರೆ.

ಬಡುಕಟ್ಟು ಸಿದ್ದಿ ಸಮುದಾಯದವರು ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವುದರಿಂದ ಪಟ್ಟಣದ ಸಂಪರ್ಕ ಸೌಲಭ್ಯಗಳ ಕೊರತೆ ಹಿನ್ನಲೆಯಲ್ಲಿ ಮಳೆಗಾಲದಲ್ಲಿ ಸಿದ್ದಿ ಜನಾಂಗದವರು ವಾಸಿಸುವ ಪ್ರದೇಶಗಳಿಗೆ ವಾಹನ ಹೋಗುವುದು ಅಸಾಧ್ಯವಾಗಿತ್ತು.

ಇಂಥ ಸಂದಿಗ್ದ ಪರಿಸ್ಥಿತಿಯಲ್ಲಿ ಕೂಡಾ ಲಕ್ಷ್ಮಿಗಣಪತಿ ಸಿದ್ದಿ ಸಿದ್ದಿರವರು ಕಳದೆ 35 ವರ್ಷಗಳಿಂದ ನಾಟಿ ವೈದ್ಯೆಯಾಗಿ ಯಾವುದೇ ಫಲಾಪೇಕ್ಷ ಇಲ್ಲದೆ ಯಶಸ್ವಿಯಾಗಿ 300 ಕ್ಕಿಂತ ಹೆಚ್ಚು ಹೆರಿಗೆಯನ್ನು ಮಾಡಿಸಿದ್ದಾರೆ. ಅವರ ಈ ನಿಸ್ವಾರ್ಥ ಸೇವೆಯನ್ನು ಪರಿಗಣಿಸಿ ಇಂದು ” ಮಹರ್ಷಿ ವಾಲ್ಮೀಕಿ ಪ್ರಶಸ್ತಿ ” ಗೆ ಭಾಜನರಾಗಿದ್ದಾರೆ.

ಯಲ್ಲಾಪುರ ತಾಲೂಕಿನ ಮಾಗೋಡ ಗ್ರಾಮದ ಬುಡಕಟ್ಟು ಸಿದ್ದಿ ಸಮುದಾಯದ ಲಕ್ಷ್ಮಿ ಸಿದ್ದಿ ಅವರು ಆಯ್ಕೆಯಾಗಿರುವುದು ಜಿಲ್ಲೆಯ ಜನತೆಗೆ ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.

ವಿಸ್ಮಯ ನ್ಯೂಸ್ ಯಲ್ಲಾಪುರ

ನಿಮ್ಮ ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ಓಂ ಶ್ರೀಭವಾನಿ ಮಾತಾ ಜ್ಯೋತಿಷ್ಯಾಲಯ. ಪ್ರೀತಿಯಲ್ಲಿ ತೊಂದರೆ? ಮದುವೆಯಲ್ಲಿ ಸಮಸ್ಯೆ? ಗಂಡ-ಹೆಂಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ? ಸಂತಾನ ಭಾಗ್ಯ, ಅಕಸ್ಮಿಕ ಧನಲಾಭ,ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಕೇರಳದ ಪ್ರಸಿದ್ಧ ಜ್ಯೋತಿಷ್ಯರು.. ಪಂಡಿತ್:ದುರ್ಗಾ ಪ್ರಸಾದ್ ಗುರೂಜಿ. ಇಂದೇ ಸಂಪರ್ಕಿಸಿ ಮೊ:9686122581

Back to top button