ಕುಮಟಾ: ದೀಪಾವಳಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೊದಲ ಬಾರಿಗೆ ಬಲಿಪಾಡ್ಯಮಿಯಂದು ಗೋಪೂಜೆ ನಡೆಸಲು ಸರ್ಕಾರ ಮಾಡಿಕೊಂಡ ಮನವಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಾಲೂಕಿನ ಅಂತ್ರವಳ್ಳಿ ವಿಶ್ವೇಶ್ವರ ದೇವಾಲಯಲ್ಲಿ ಕೂಡಾ ಅರ್ಥಪೂರ್ಣವಾಗಿ ಗೋಪೂಜೆ ಆಚರಿಸಲಾಯಿತು. ದೇವಾಲಯಕ್ಕೆ ಗೋವುಗಳನ್ನು ಕರೆತಂದು ಅವುಗಳಿಗೆ ಪುಷ್ಪಗಳಿಂದ ಶೃಂಗರಿಸಿ ಪೂಜಿಸಲಾಯಿತು.
ಪುರಾಣ ಮತ್ತು ಉಪನಿಷತ್ತುಗಳಲ್ಲೂ ಗೋಮಾತೆಗೆ ವಿಶೇಷ ಸ್ಥಾನವಿದೆ. ಗೋಮಾತೆಯನ್ನು ಪೂಜಿಸಿದರೆ ಅನೇಕ ಸಮಸ್ಯೆಗಳು ಪರಿಹಾರವಾಗುತ್ತದೆ ಎಂದೂ ಕೂಡ ನಂಬಲಾಗಿದೆ. ಹೀಗಾಗಿ ಗೋ ಮಾತೆಯ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ಗೋ ಉತ್ಪನ್ನಗಳ ಖರೀದಿಗೆ ಹೆಚ್ಚು ಒತ್ತು ನೀಡಲು ಪಶುಸಂಗೋಪನೆ ಇಲಾಖೆ ಎಲ್ಲಾ ದೇವಾಲಯಗಳಲ್ಲಿ ಗೋಪೂಜೆ ನೆರವೇರಿಸುವಂತೆ ಕೋರಿತ್ತು.
ವಿಸ್ಮಯ ನ್ಯೂಸ್, ಕುಮಟಾ
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537