Join Our

WhatsApp Group
Important
Trending

ಕಚ್ಚಿದ ಹಾವನ್ನೇ ಹಿಡಿದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಭೂಪ!

ಭಟ್ಕಳ: ಹೆಬ್ಬಾವು ಕಚ್ಚಿದರೂ ವಿಚಲಿತನಾಗದೆ ಹೆಬ್ಬಾವು ಹೊತ್ತುಕೊಂಡೇ ಆಸ್ಪತ್ರೆಗೆ ಚಿಕಿತ್ಸೆ ದಾಖಲಾಗಿರುವ ಘಟನೆಯೊಂದು ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಹೆಬ್ಬಾವು ಕಚ್ಚಿಸಿಕೊಂಡು ಗಾಯಗೊಂಡ ವ್ಯಕ್ತಿಯನ್ನು
ಮಣ್ಕುಳಿ ಸೀತಾರಾಮ ನಾರಾಯಣ ನಾಯ್ಕ ಎಂದು ಗುರುತಿಸಲಾಗಿದೆ.

ಭಟ್ಕಳದಲ್ಲಿ ಕೆಲದಿನಗಳಿಂದ ಮಳೆ ಸುರಿಯುತ್ತಿರುವ,ಹಿನ್ನೆಲೇ ಹೆಬ್ಬಾವೊಂದು ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಇರುವ ವ್ಯಕ್ತಿ ಒಬ್ಬರ ಮನೆಯ ಪಕ್ಕದ ರಸ್ತೆಯಲ್ಲಿ ಪತ್ತೆಯಾಗಿದೆ.
ಇದನ್ನು ಗಮನಿಸಿದ ಸೀತಾರಾಮ ನಾಯ್ಕ
ಮತ್ಯಾರಿಗಾದರೂ ಕಚ್ಚಿದರೆ ಅಪಾಯವಾಗುತ್ತದೆ ಎಂದು ತಿಳಿದು ತನ್ನ ಕೆಲವು ಸ್ನೇಹಿತರ ಸಹಾಯದಿಂದ ಹಾವನ್ನು ಸೆರೆಹಿಡಿಯಲು ಪ್ರಯತ್ನಿಸಿದ್ದಾರೆ.

ಹಾವನ್ನು ಸೆರೆಹಿಡಿಯುವ ವೇಳೆ ಸೀತಾರಾಮ ಅವರಿಗೆ ಹಾವು ಕಚ್ಚಿದ್ದು, ಹೆಬ್ಬಾವಿನಿಂದ ಕಚ್ಚಿಸಿಕೊಂಡ ಇವರು ವಿಚಲಿತಗೊಳ್ಳದೆ , ಆರೇಳು ಅಡಿ ಉದ್ದದ ಹೆಬ್ಬಾವವನ್ನು ತಮ್ಮ ಸ್ನೇಹಿತರ ಸಹಾಯದೊಂದಿಗೆ ಹಿಡಿದುಕೊಂಡೇ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ವಿಷಯ ತಿಳಿದ ಅರಣ್ಯ ಇಲಾಖೆ ಸಿಬ್ಬಂದಿ ಆಸ್ಪತ್ರೆಗೆ ಬಂದು ಹಾವನ್ನು ಹಿಡಿದುಕೊಂಡು, ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ. ಸದ್ಯ ಸೀತಾರಾಮ ಅವರಿಗೆ ಭಟ್ಕಳ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ

Back to top button