ಕೌಟುಂಬಿಕ ಸಮಸ್ಯೆ? ವಿದ್ಯಾರ್ಥಿಗಳಿಗೆ ಪಾಠಮಾಡುತ್ತಾ ಬದುಕು ಸಾಗಿಸುತ್ತಿದ್ದ ಶಿಕ್ಷಕಿ ಸಾವಿಗೆ ಶರಣು
ಶಿರಸಿ: ವಿದ್ಯಾರ್ಥಿಗಳಿಗೆ ಪಾಠಮಾಡುತ್ತಾ ಬದುಕು ಸಾಗಿಸುತ್ತಿದ್ದ ಶಿಕ್ಷಕಿಯೊಬ್ಬಳು ಸಾವಿಗೆ ಶರಣಾದ ಘಟನೆ ತಾಲೂಕಿನ ಮರಾಠಿಕೊಪ್ಪದಲ್ಲಿ ನಡೆದಿದೆ. ಹೌದು, ಶಿಕ್ಷಕಿಯೊಬ್ಬಳು ದುಡುಕಿನ ನಿರ್ಧಾರ ತೆಗೆದುಕೊಂಡು ಇಹಲೋಕ ಯಾತ್ರೆ ಮುಗಿಸಿದ್ದಾರೆ. 29 ವರ್ಷ ವಯೋಮಾನದ ಸ್ವಾತಿ ನವೀನ ಗಾಂವಕರ ಎಂಬಾಕೆಯೇ ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಕೌಟುಂಬಿಕ ಸಮಸ್ಯೆಯಿಂದ ಸಾವಿಗೆ ಶರಣಾಗಿದ್ದಾಳೆ ಎಂಬ ಮಾತುಗಳು ಕೇಳಿಬರುತ್ತಿವೆ.
ಮೃತ ಶಿಕ್ಷಕಿ ಸಿದ್ದಾಪುರ ತಾಲೂಕಿನ ಶಿರಗುಣಿ ಸಮೀಪದ ದನ್ನಹಳ್ಳಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಳು. ಈ ಕುರಿತು ಶಿರಸಿ ಮಾರುಕಟ್ಟೆ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿ. ಎಸ್.ಐ. ಭೀಮಾಶಂಕರ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸಾವಿಗೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲವಾಗಿದೆ.
ವಿಸ್ಮಯ ನ್ಯೂಸ್, ಶಿರಸಿ
ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 9880446537