Follow Us On

WhatsApp Group
Important
Trending

ರಸ್ತೆ ದಾಟುತ್ತಿದ್ದ ವೃದ್ಧ ಮಹಿಳೆಗೆ ಡಿಕ್ಕಿ ಹೊಡೆದ ಲಾರಿ: ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲು

ಭಟ್ಕಳ: ರಸ್ತೆ ದಾಟುತ್ತಿದ್ದ ವೃದ್ಧ ಮಹಿಳೆಯೊಬ್ಬಳಿಗೆ ಲಾರಿಯೊಂದು ಡಿಕ್ಕಿ ಹೊಡೆದ ಘಟನೆ ಮಣ್ಕುಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ. ಗಾಯಗೊಂಡ ವೃದ್ಧ ಮಹಿಳೆಯನ್ನು ಪದ್ಮಾವತಿ ಭಟ್ ಎಂದು ಗುರುತಿಸಲಾಗಿದ್ದು, ಈಕೆ ಮಾರುಕೇರಿಯ ಮಠದಹಿತ್ಲು ನಿವಾಸಿ ಎಂದು ತಿಳಿದು ಬಂದಿದೆ. ಈಕೆ ಮಣ್ಕುಳಿಯಲ್ಲಿನ ರಾಷ್ಟ್ರೀಯ ಹೆದ್ದಾರಿ ದಾಟುತ್ತಿರುವ ವೇಳೆ ಕುಂದಾಪುರದಿoದ ಶಿರಾಲಿ ಅಳ್ವೆಕೋಡಿ ಸಮುದ್ರ ತೀರಕ್ಕೆ ಶಿಲೆಕಲ್ಲು ಹಾಕಲು ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ.

ಅಪಘಾತದ ಬಳಿಕ ವೃದ್ಧ ಮಹಿಳೆಯನ್ನು ಭಟ್ಕಳ ಸರ್ಕಾರಿ ಆಸ್ಪತ್ರೆ ಸಾಗಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತ ಸ್ಥಳಕ್ಕೆ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ

ಶ್ರೀ ಗುರುರಾಘವೇಂದ್ರ ಸ್ವಾಮಿ ಜ್ಯೋತಿಷ್ಯ ಕೇಂದ್ರ.. ಮದುವೆ ವಿಳಂಬ ಸಮಸ್ಯೆಯನ್ನು, ಸಂತಾನ ಸಮಸ್ಯೆಯನ್ನು ಕೂಡಲೇ ನಿವಾರಿಸಬಲ್ಲರು. ಉದ್ಯೋಗ ಮತ್ತು ಆರ್ಥಿಕ ಸಮಸ್ಯೆಗೂ ಪರಿಹಾರ ಶತಸಿದ್ಧ. ಪ್ರೀತಿಯಲ್ಲಿ ತೊಂದರೆ? ಗಂಡ-ಹೆoಡತಿಯಲ್ಲಿ ಕಿರಿಕಿರಿ, ಆರೋಗ್ಯದಲ್ಲಿ ಸಮಸ್ಯೆ? ವಿಧ್ಯಾಭ್ಯಾಸದಲ್ಲಿ ಅಡೆತಡೆ, ಮಾನಸಿಕ ತೊಂದರೆ, ಇನ್ನೂ ನಿಮ್ಮ ಯಾವುದೇ ಗುಪ್ತ ಸಮಸ್ಯೆಗಳಿಗೆ 100%ರಷ್ಟು ಗ್ಯಾರಂಟಿ ಪರಿಹಾರ. ಪ್ರಸಿದ್ಧ ದೈವಶಕ್ತಿ ಜ್ಯೋತಿಷ್ಯರು: ಪಂಡಿತ್- ಆರ್ ವಿ ಭಟ್ .. ಇಂದೇ ಸಂಪರ್ಕಿಸಿ ಮೊಬೈಲ್ ನಂಬರ್ : 988044653

Back to top button