ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ: ಕರ್ನಾಟಕ ತಂಡಕ್ಕೆ ಹಳಿಯಾಳದ ನಾಲ್ವರು ಕುಸ್ತಿಪಟುಗಳು ಆಯ್ಕೆ
ಹಳಿಯಾಳ: ರಾಂಚಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಹಳಿಯಾಳ ತಾಲೂಕಿನ ನಾಲ್ವರು ಕುಸ್ತಿಪಟುಗಳು ಆಯ್ಕೆಯಾಗಿದ್ದಾರೆ. ಗದಗ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ 15 ವರ್ಷದೊಳಗಿನ ವಯೋಮಾನದ ಕರ್ನಾಟಕ ರಾಜ್ಯ ತಂಡದ ಆಯ್ಕೆ ಪ್ರಕ್ರಿಯೆ ನಡೆಯಿತು.
ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಹಳಿಯಾಳ ವಸತಿ ನಿಲಯದ ಕುಸ್ತಿಪಟುಗಳಾದ ಪ್ರಿನ್ಸಿಟಾ ಸಿದ್ದಿ ನಿಯಮಾವಳಿಯಂತೆ (58 ಕೆ.ಜಿ), ಪ್ರತಿಕ್ಷಾ ಭೋವಿ (62 ಕೆ.ಜಿ), ಹಳಿಯಾಳ ಕುಸ್ತಿ ಅಖಾಡಾದಲ್ಲಿ ತರಬೇತಿ ಪಡೆಯುತ್ತಿರುವ ಮನಿಷಾ ಸಿದ್ದಿ (66 ಕೆ.ಜಿ), ಇರ್ಫಾನ್ ವಾಲೀಕರ (41 ಕೆ.ಜಿ) ಅವರುಗಳು ಆಯ್ಕೆಯಾಗಿದ್ದಾರೆ. ಡಿಸೆಂಬರ್ 15,16 ಮತ್ತು 17ರಂದು ನಡೆಯಲಿರುವ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡದಲ್ಲಿರಲಿದ್ದಾರೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091