ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಸಿದ್ದಾಪುರ ಬಿಜೆಪಿ ಮಂಡಲದಿಂದ ಪಟ್ಟಣದ ರಾಮಕೃಷ್ಣ ಹೆಗಡೆ ವೃತ್ತದಲ್ಲಿ ಪಟಾಕಿ ಸಿಡಿಸಿ, ಪಕ್ಷದ ಪರವಾಗಿ ಘೋಷಣೆಯನ್ನು ಕೂಗಿ ವಿಜಯೋತ್ಸವ ಆಚರಣೆ ಮಾಡಲಾಯಿತು.
ಈ ವೇಳೆ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಕೆ. ಜಿ. ನಾಯ್ಕ, ಹಣಜೀಬೈಲ್ ಮಾತನಾಡಿ ಉತ್ತರ ಕನ್ನಡ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳ ಮತಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾದ ಗಣಪತಿ ಉಳ್ವೇಕರ ಅವರು ವಿಜಯ ಸಾಧಿಸುವುದರೊಂದಿಗೆ ಜಿಲ್ಲೆಯಿಂದ ಪ್ರಥಮ ಬಾರಿಗೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳ ಮತಕ್ಷೇತ್ರದಿಂದ ನಾವು ಆಯ್ಕೆಯಾಗಿದ್ದೇವೆ.
ಈ ನಿಟ್ಟಿನಲ್ಲಿ ಭಾರತೀಯ ಜನತಾ ಪಾರ್ಟಿ ಪ್ರಮುಖರು ಹಾಗೂ ಕಾರ್ಯಕರ್ತರು ಇಲ್ಲಿ ವಿಜಯೋತ್ಸವ ಆಚರಣೆ ಮಾಡುತ್ತಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಇನ್ನೂ ಗಟ್ಟಿಯಾಗಿದೆ ಎಂಬ ವಿಚಾರವನ್ನು ಸಂದೇಶವನ್ನು ಮತದಾರರು ತಿಳಿಸಿಕೊಟ್ಟಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷ ನಾಗರಾಜ ನಾಯ್ಕ ಬೇಡ್ಕಣಿ, ಪ್ರಧಾನ ಕಾರ್ಯದರ್ಶಿ ಎಸ್. ಕೆ. ಮೇಸ್ತ, ಜಿಲ್ಲಾ ಕಾರ್ಯದರ್ಶಿ ಗುರುರಾಜ್ ಶಾನಭಾಗ್, ಪಟ್ಟಣ ಪಂಚಾಯತ ಉಪಾಧ್ಯಕ್ಷ ರವಿಕುಮಾರ ನಾಯ್ಕ, ಸ್ಥಾಯಿ ಸಮಿತಿ ಅಧ್ಯಕ್ಷ ವಿನಯ ಹೊನ್ನೆಗುಂಡಿ,. ಪ.ಪಂ. ಸದಸ್ಯ ಸುಧೀರ್ ನಾಯ್ಕ ಕೊಂಡ್ಲಿ, ಅಲ್ಪ ಸಂಖ್ಯಾತರ ಮೋರ್ಚಾದ ಅಧ್ಯಕ್ಷ ವಿಕ್ಕಿ ಫೆರ್ನಾಂಡಿಸ್, ಪ್ರಧಾನ ಕಾರ್ಯದರ್ಶಿ ರಫೀಕ್ ಸಾಬ್, ಸಾಮಾಜಿಕ ಜಾಲತಾಣ
ಪ್ರಕೋಷ್ಠ ಸಂಚಾಲಕ ಗಣೇಶ್ ಮೇಸ್ತ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀಶ ನಾಯ್ಕ, ಪ್ರಮುಖರಾದ ಸತೀಶ ಕಾಮತ್, ವಿಜಯ ಹೆಗಡೆ, ಮಾರುತಿ ಕಾನಗೋಡ, ಶ್ಯಾಮು ಅಂಬಿಗ, ವಿಷ್ಣು ನಾಯ್ಕ ಇತರರು ಹಾಜರಿದ್ದರು.
ವಿಸ್ಮಯ ನ್ಯೂಸ್ ಸಿದ್ದಾಪುರ