ಕಾರಿನಲ್ಲಿ ಕಾಲೇಜಿಗೆ ಬಿಡುತ್ತೇನೆ ಎಂದು ನಂಬಿಸಿ ವಿದ್ಯಾರ್ಥಿನಿಯ ಅಪಹರಣ: ದೂರಿನಲ್ಲಿ ಏನಿದೆ ನೋಡಿ?
ಶಿರಸಿ: ಮನೆಯಿಂದ ಕಾಲೇಜಿಗೆ ತೆರಳುತ್ತೇನೆಂದು ಹೊರಟ ನಗರದ ನಿಲೇಕಣಿ ಕಾಲೇಜಿಗೆ ಹೊರಟ ಬಾಲಕಿ, ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದಾಳೆ. ನಿಲೇಕಣಿ ಕಾಲೇಜಿನ ವಿದ್ಯಾರ್ಥಿ ಮನೆಯಿಂದ ಕಾಲೇಜಿಗೆಂದು ಹೊರಟಿದ್ದಳು. ಆಗ ಕಾರಿನಲ್ಲಿ ಬಂದ ಆರೋಪಿಗಳು ವಿದ್ಯಾರ್ಥಿನಿಯನ್ನು ಪುಸಲಾಯಿಸಿ ಅಪಹರಣ ಮಾಡಿರುವುದಾಗಿ ಪ್ರಕರಣ ದಾಖಲಾಗಿದೆ. ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿದ್ದು, ಪರೀಕ್ಷೆಗೆ ಕಾರಿನಲ್ಲಿ ಬಿಡುತ್ತೇನೆ ಎಂದು ನಂಬಿಸಿ, ವಿದ್ಯಾರ್ಥಿನಿಯನ್ನು ಅಪರಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.
ಜಬ್ಬಿವುಲ್ಲಾ ಶುಕುರಸಾಬ್ ಧಾರವಾಡಕರ (22) ವರ್ಷದ ಎಂಬಾತನೇ ಕಿಡ್ನ್ಯಾಪ್ ಮಾಡಿದ ಆರೋಪಿ ಈ ದೂರಿನಲ್ಲಿ ಉಲ್ಲೇಖಿಸಲಾಗಿದೆ.. ಈತನ ವಿರುದ್ಧ ಬಾಲಕಿಯ ಪಾಲಕರು ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ.
ವಿಸ್ಮಯ ನ್ಯೂಸ್, ಶಿರಸಿ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091