ಆಸ್ಪತ್ರೆಗೆ ತೆರಳುತ್ತಿದ್ದವರ ದುರ್ಮರಣ: ಕಾರು, ಟಿಪ್ಪರ್ ಮಧ್ಯೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು
ಯಲ್ಲಾಪುರ: ಟಿಪ್ಪರ್ ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಯಲ್ಲಾಪುರದಿಂದ ಬೆಳಗಾವಿಯ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳಿದ್ದ ಇಬ್ಬರು ವಯೋವೃದ್ಧ ವ್ಯಕ್ತಿಗಳು ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಹಿರೇಬಾಗೇವಾಡಿಯಲ್ಲಿ ನಡೆದಿದೆ. ಅಲ್ಲದೆ, ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇನ್ನಿಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಪಟ್ಟಣದ ಮಚ್ಚಿಗಲ್ಲಿ ನಿವಾಸಿ ಸಯ್ಯದ್ ದಾವುದ್ ಸಯ್ಯದ ಇಸ್ಮಾಯಿಲ್, ಹಳೆಕೋರ್ಟ್ ಮಚ್ಚಿಗಲ್ಲಿ ನಿವಾಸಿ ಸುಶೀಲಾ ಡಿಕೋಸ್ಟಾ, ಹಾಗೂ ಕಾರಿನ ಚಾಲಕ ಕಾಳಮ್ಮನಗರ ನಿವಾಸಿ ವಸಿಂ ಹುಸೇನಖಾನ್ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು ಎಂದು ತಿಳಿದುಬಂದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸೈಯದ್ ದಾವುದ್ ಸೈಯದ್ ಇಸ್ಮಾಯಿಲ್ ಸಂಬoಧಿಗಳಾದ ಸಯ್ಯದ ಮುಕ್ಕಾರ್ ಹಾಗೂ ಸಯ್ಯದ ಜಾವೇದ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ,
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್,
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091