ಉತ್ತರಕನ್ನಡದಲ್ಲಿ ನೈಟ್ ಕರ್ಫ್ಯೂ ಸಮಯ ಬದಲಾವಣೆ: ಡಿಸೆಂಬರ 31ರಂದು ನಿಷೇಧಾಜ್ಞೆ : ಜಿಲ್ಲಾಧಿಕಾರಿ ಆದೇಶದಲ್ಲಿ ಏನಿದೆ ನೋಡಿ?
ಕಾರವಾರ: ಹೊಸ ವರ್ಷಾಚರಣೆಯಂದು ಜನಸಂದಣಿ, ಗುಂಪು ಸೇರುವಿಕೆ ಹೆಚ್ಚಲಿದ್ದು, ಸಂಭವನೀಯ ಕೋವಿಡ್ ಹರಡುವಿಕೆ ತಡೆಯಲು ಉತ್ತರ ಕನ್ನಡದಲ್ಲಿ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಹೊರಡಿಸಿ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಸಂಬoಧಿಸಿದoತೆ ಹೆಚ್ಚಿನ ಪ್ರವಾಸಿಗರು ಸಮುದ್ರ ತೀರದಲ್ಲಿ, ಸಾರ್ವಜನಿಕ ಉದ್ಯಾನವನಗಳಲ್ಲಿ ಸೇರಿ ಆಚರಿಸುವುದರಿಂದ ಕೋವಿಡ್ ಹರಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಜಿಲ್ಲೆಯ ಕರಾವಳಿ ಪ್ರದೇಶಗಳಾದ ಕಾರವಾರ, ಹೊನ್ನಾವರ, ಅಂಕೋಲಾ, ಕುಮಟಾ ಹಾಗೂ ಭಟ್ಕಳ ತಾಲ್ಲೂಕುಗಳಲ್ಲಿಯ ಸಮುದ್ರ ತೀರಗಳಲ್ಲಿ ಹಾಗೂ ಸಾರ್ವಜನಿಕ ಉದ್ಯಾನವನಗಳಲ್ಲಿ ನಿಷೇಧಾಜ್ಞೆ ಹೇರಲಾಗಿದೆ.
ಡಿಸೆಂಬರ್ 31ರಂದು ರಾತ್ರಿ ಏಳು ಗಂಟೆಯಿoದ ಬೆಳಿಗ್ಗೆ 5 ಗಂಟೆಯವರೆಗೆ ಈ ಸ್ಥಳಗಳಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರನ್ನು ನಿರ್ಭಂಧಿಸುವ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಹಿತಾಸಕ್ತಿಯ ಕುರಿತು ಆದೇಶ ಹೊರಡಿಸಿದ್ದಾರೆ. ಡಿಸೆಂಬರ್ 31ರಂದು ರಾತ್ರಿ 8 ಘಂಟೆಯಿoದ ಮುಂಜಾನೆ 5 ಗಂಟೆಯವರೆಗೆ ನಿಷೇಧಾಜ್ಞೆ ವಿಧಿಸಿ ಆದೇಶಿಸಿದ್ದಾರೆ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕಠಿಣ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದ್ದಾರೆ.
ವಿಸ್ಮಯ ನ್ಯೂಸ್, ಕಾರವಾರ
ಅಡಿಕೆ ಬೆಳೆಗಾರರಿಗೆ ಕಾಡುತ್ತಿರುವ ಸಮಸ್ಯೆಯಾದ ಕೊಳೆರೋಗ ಹಾಗು ಕಾರ್ಮಿಕರ ಸಮಸ್ಯೆಗೆ ಶಾಶ್ವತ ಪರಿಹಾರ… ನೆಲದಿಂದಲೇ 80 ರಿಂದ ನೂರು ಅಡಿಯವರೆಗೆ ಮದ್ದು ಹೊಡೆಯಲು, ಕೊನೆ ಕೊಯ್ಯಲು ಇದೀಗ ದೋಟಿ ಬಂದಿದೆ. ಈ ದೋಟಿ ತುಂಬಾ ಹಗುರವಾಗಿದ್ದು, ಕಾರ್ಮಿಕರು, ಮನೆ ಮಾಲೀಕ ಸೇರಿ ಯಾರು ಬೇಕಾದರು ಸುಲಭವಾಗಿ ಬಳಸಬಹುದಾಗಿದೆ. ಇದರಲ್ಲಿ ದಿನಕ್ಕೆ ಒಂದು ಸಾವಿರದಿಂದ 2 ಸಾವಿರ ಅಡಿಕೆಕೊನೆ ಕೊಯ್ಯಬಹುದು. ಕತ್ತು ನೋವು, ಬೆನ್ನುನೋವಿನ ಸಮಸ್ಯೆ ಇಲ್ಲದೆ, ದಿನಕ್ಕೆ ಎರಡು ರಿಂದ ನಾಲ್ಕು ಎಕರೆ ತನಕ ಮದ್ದು ಹೊಡೆಯಬಹುದು. ಬಹುಪಯೋಗಿ ಈ ದೋಟಿ ರೈತರ ಹಣ ಉಳಿತಾಯ ಮಾಡಲಿದ್ದು, ಹೆಚ್ಚಿನ ಮಾಹಿತಿಗಾಗಿ ನಮ್ಮನ್ನು ಸಂಪರ್ಕಿಸಿ. 7259350487, 8217319091