ಪಲ್ಟಿಯಾಗಿ ಮನೆಗೆ ನುಗ್ಗಿದ ಗ್ಯಾಸ್ ಟ್ಯಾಂಕರ್:ಸ್ಥಳೀಯರು ಮನೆಯಿಂದ ಹೊರಕ್ಕೆ: ಸ್ಥಳದಲ್ಲಿ ಗೊಂದಲದ ವಾತಾವರಣ? ಸ್ಥಳದಲ್ಲಿ ಬೀಡುಬಿಟ್ಟಿರುವ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ
ಕುಮಟಾ: ಗ್ಯಾಸ್ ಟ್ಯಾಂಕರ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ತಾಲೂಕಿನ ಹೊನ್ಮಾವ್ ಕ್ರಾಸ್ ಸಮೀಪ ಸಂಭವಿಸಿದೆ. ಟ್ಯಾಂಕರ್,, ಹೆದ್ದಾರಿ ತಿರುವಿನಲ್ಲಿ ಪಕ್ಕದಲ್ಲಿದ್ದ ಮನೆಗೆ ನುಗ್ಗಿದ್ದು ಮನೆಗೆ ಹಾನಿಯಾಗಿದೆ. ಪಕ್ಕದಲ್ಲಿಯೇ ವಿದ್ಯುತ್ ಟ್ರಾನ್ಸ್ ಫರ್ಮರ್ ಸಹ ಇದ್ದು, ಬೆಂಕಿಯ ಒಂದು ಕಿಡಿ ಹೊತ್ತಿಕೊಂಡಿದ್ದರೂ ಭಾರೀ ಅಪಾಯ ಸಂಭವಿಸುವ ಸಾಧ್ಯತೆಯಿತ್ತು.
ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ಗ್ಯಾಸ್ ಟ್ಯಾಂಕರ್ ಪಲ್ಟಿ ಆಗುತ್ತಿದ್ದಂತೆ ಸ್ಥಳದಲ್ಲಿ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಆತಂಕಗೊoಡಿದ್ದರು. ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿ ಬಿಡುಬಿಟ್ಟಿದ್ದು, ಕಾರ್ಯಾಚರಣೆ ಚುರುಕುಗೊಂಡಿದೆ.
ಗ್ಯಾಸ್ ಟ್ಯಾಂಕರ್ ನಿಂದ ಗ್ಯಾಸ್ ಸೋರಿಕೆ ಇದೆ ಎನ್ನಲಾಗಿದ್ದು, ಸುತ್ತಲಿನ ಜನರು ಮನೆಯಲ್ಲಿ ಬೆಂಕಿ ಹೊತ್ತಿಸದಂತೆ ಮಾಹಿತಿ ನೀಡಲಾಗಿದೆ. ಪೊಲೀಸ್ ಹಾಗೂ ಅಗ್ನಿಶಾಮಕ ದಳದವರು ಸೂಕ್ತ ಮುನ್ನೆಚ್ಚರಿಕೆ ಕೈಗೊಂಡಿದ್ದು ಕಾರ್ಯಾಚರಣೆ ಆರಂಭಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿಯ ವಾಹನ ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಾಸ ಉಂಟಾಗಿದ್ದು, ಬದಲಿ ವ್ಯವಸ್ಥೆ ಮಾಡಲಾಗಿದೆ.
ವಿಸ್ಮಯ ನ್ಯೂಸ್, ಕುಮಟಾ