Follow Us On

WhatsApp Group
Important
Trending

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ

ಬೆಂಗಳೂರು: ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೌದು, ಬಿಎಸ್‌ವೈ ಅವರ ಮೊಮ್ಮಗಳು ಅಂದರೆ ಪದ್ಮಾವತಿ ಅವರ ಪುತ್ರಿ ಸೌಂದರ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ. ಬಿಎಸ್​ ಯಡಿಯೂರಪ್ಪ ಅವರ ದ್ವಿತೀಯ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ ಮೌಂಟ್ ಕಾರ್ಮೆಲ್​ ಬಳಿಯ ಫ್ಲ್ಯಾಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಿನ ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆ ಆಗಿರುವ ಸೌಂದರ್ಯ ಕಳೆದ ವರ್ಷ ಮದುವೆಯಾಗಿದ್ದರು. ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button