ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ತಿಳಿಸಿ ಸಾವಿಗೆ ಶರಣಾದ ಪತಿ: ಡೆತ್ ನೋಟ್ ನಲ್ಲಿ ಏನಿದೆ ನೋಡಿ?
ಕಾರವಾರ: ಪತ್ನಿ ಹಾಗೂ ಪೊಲೀಸರಿಗೆ ಪ್ರತ್ಯೇಕ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ಉದ್ಯೋಗಿಯೊಬ್ಬ ಹೊಟೇಲ್ ಒಂದರಲ್ಲಿ ಸಾವಿಗೆ ಶರಣಾದ ಘಟನೆ ಕಾರವಾರದಲ್ಲಿ ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಈಶ್ವರ್ ಭಟ್ (38) ನೇಣಿಗೆ ಶರಣಾದ ದುರ್ದೈವಿ. ಈತ ಕಂದಾಯ ಇಲಾಖೆ ಉದ್ಯೋಗಿಯಾಗಿದ್ದ.
ಕಾರವಾರದ ಎಸಿ ಕಚೇರಿಯಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿದ್ದ ಈಶ್ವರ್ ಅವರು ಮೂಲತ: ಹೊನ್ನಾವರವರು. ಅನಾರೋಗ್ಯದ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ನಲ್ಲಿ ತಿಳಿಸಿದ್ದಾರೆ. ಪತ್ನಿ ಹಾಗೂ ಪೊಲೀಸರಿಗೆ ಪ್ರತ್ಯೇಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ನಾನು ನಿಮಗಾಗಿ ಯಾವ ಆಸ್ತಿ ಮಾಡಿಲ್ಲ, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳುವಂತೆ ಪತ್ನಿಗೆ ಪತ್ರದಲ್ಲಿ ತಿಳಿಸಿ, ಕ್ಷಮೆಯಾಚಿಸಿದ್ದಾರೆ. ಸ್ಥಳಕ್ಕೆ ಕಾರವಾರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ
ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ