
ಭಟ್ಕಳ: ಫೆಬ್ರವರಿ 06 ರ ರವಿವಾರ ಭಟ್ಕಳದ ಪದ್ಮಾವತಿ ದೇವಿಯ ಪಲ್ಲಕ್ಕಿ ಉತ್ಸವ ನಡೆಯಲಿದೆ ಎಂದು ದೇವಸ್ಥಾನದ ಧರ್ಮದರ್ಶಿಗಳು ಮಾಹಿತಿ ನೀಡಿದ್ದಾರೆ. ಶ್ರೀ ದೇವಿಯ ಸನ್ನಿಧಿಯಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಮಧ್ಯಾಹ್ನ 12.30 ಕ್ಕೆ ಮಹಾಪೂಜೆ, 1 ಗಂಟೆಯಿoದ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ಪುರಬೀದಿಯಲ್ಲಿ ಶ್ರೀ ದೇವಿಯ ಪಲ್ಲಕ್ಕಿಯ ಮೆರವಣಿಗೆ ನಡೆಯಲಿದೆ.
ಪಲ್ಲಕ್ಕಿಯ ಮೆರವಣಿಗೆಯು ದೇವಾಲಯದಿಂದ ಹೊರಟು ರಘುನಾಥ ರಸ್ತೆಯ ಮೂಲಕ ಸಾಗಿ ಪುಷ್ಪಾಂಜಲಿ ಚಿತ್ರಮಂದಿರದ ತನಕ ತಲುಪಿ ಅಲ್ಲಿಂದ ಹಿಂದಿರುಗಿ ವೀರವಿಠ್ಠಲ ರಸ್ತೆಯ ಮಾರ್ಗವಾಗಿ ನೆಹರು ರಸ್ತೆ, ಹೂವಿನ ಚೌಕ ಮೂಲಕ ಮಾರಿಗುಡಿ ಹತ್ತಿರ ಬಸದಿಯ ಎದುರಿನ ರಸ್ತೆಯ ಮಾರ್ಗವಾಗಿ ಆಸರಕೇರಿ ನಿಚ್ಚಲಮಕ್ಕಿ ತಿರುಮಲ ವೆಂಕಟರಮಣ ದೇವಸ್ಥಾನಕ್ಕೆ ತೆರಳಲಿದೆ. ಅಲ್ಲಿಂದ ಸೊನಾರಕೇರಿ ಹಾಗೆಯೇ ಶಹರ ಪೋಲೀಸ್ ಠಾಣೆಯಲ್ಲಿ ಪೂಜೆ ಸ್ವೀಕರಿಸಿ ಹಳೆಬಸ್ ನಿಲ್ದಾಣ ಕಳಿಹನುಮಂತ ದೇವಸ್ಥಾನ ರಸ್ತೆಯ ಮೂಲಕ ದೇವಾಲಯಕ್ಕೆ ಹಿಂದಿರುಗಲಿದೆ. ಈ ಉತ್ಸವದಲ್ಲಿ ಎಲ್ಲ ಭಕ್ತರು ಪಾಲ್ಗೊಂಡು ಶ್ರೀ ದೇವಿಯ ಪ್ರಸಾದ ಸ್ವೀಕರಿಸಬೇಕಾಗಿ ಧರ್ಮದರ್ಶಿಗಳು ಕೋರಿದ್ದಾರೆ.
ವಿಸ್ಮಯ ನ್ಯೂಸ್, ಉದಯ್ ಎಸ್ ನಾಯ್ಕ, ಭಟ್ಕಳ
ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ. ನಿಮ್ಮೆಲ್ಲಾ ಸಮಸ್ಯೆಗಳಿಗೂ ಇದೆ ಪರಿಹಾರ: ಶ್ರೀಶ್ರೀ ಪಂಡಿತ್ ಗೋಪಾಲ್ ಶರ್ಮಾ, ಪ್ರಸಿದ್ಧಿ ಪಡೆದ ಜ್ಯೋತಿಷಿಗಳು- 8884147324 : ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ, ಜಾತಕ ವಿಶ್ಲೇಷಣೆ, ಮದುವೆ ಸಮಸ್ಯೆ, ಹಸ್ತಮುದ್ರಿಕಾ ಶಾಸ್ತ, ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ











