ಭಟ್ಕಳ: ಬ್ಯಾಂಕ್ ಮ್ಯಾನೇಜರೋರ್ವ ಬ್ಯಾಂಕಿನ ಒಂದೂವರೆ ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡು ಸದ್ಯ ಪರಾರಿಯಾಗಿರುವ ಘಟನೆ ಭಟ್ಕಳದಲ್ಲಿ ನಡೆದಿದೆ .
ನ್ಯೂ ಇಂಗ್ಲಿಷ್ ಸ್ಕೂಲ್ ರಸ್ತೆಯಲ್ಲಿರುವ 29-02-2019ರಿಂದ 11-04-2022ರ ಅವಧಿಯಲ್ಲಿ ಕೆಲಸ ಮಾಡುತ್ತಿದ್ದ ಸ್ಟೇಟ್ ಬ್ಯಾಂಕ್ ಆಫ್ ಭಟ್ಕಳ ಇದರ ಬಜಾರ ಶಾಖೆಯ ಮ್ಯಾನೇಜರ್ ಹಣ ದುರುಪಯೋಗ ಪಡಿಸಿಕೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪಿ ಬ್ಯಾಂಕ್ ಮ್ಯಾನೇಜರ್ ಅನುಪ್ ಪೈ ಮೂಲತಃ ಮಂಗಳೂರಿನ ಬೋಳಪು ಗುಡ್ಡೆ ಕಾವೂರು ನಿವಾಸಿ ಎಂದು ತಿಳಿದು ಬಂದಿದೆ.
ಈತ ಬ್ಯಾಂಕಿಗೆ ಮೋಸ ಮಾಡುವ ಉದ್ದೇಶದಿಂದ ಬ್ಯಾಂಕ್ ಗ್ರಾಹಕರೊಂದಿಗೆ ಒಳ ಸಂಚು ಮಾಡಿಕೊಂಡು ಬ್ಯಾಂಕಿನ ಸಿಸ್ಟಮ್ ಸಸ್ಪೆನ್ ಖಾತೆಗೆ ಖರ್ಚು ಹಾಕಿ ಬ್ಯಾಂಕನ ಗ್ರಾಹಕರ ಖಾತೆಗೆ ಜಮಾ ಮಾಡುವ ಮೂಲಕ ಬ್ಯಾಂಕಿನ ಸುಮಾರು ಒಂದೂವರೆ ಕೋಟಿ ಹಣವನ್ನು ದುರುಪಯೋಗ ಪಡಿಸಿಕೊಂಡು ಬ್ಯಾಂಕಿಗೆ ಮೋಸ ಮಾಡಿದ್ದಾನೆ.
ಸದ್ಯ ಈತ ವಾಸವಿದ್ದ ಭಟ್ಕಳ ರೈಲ್ವೆ ಸ್ಟೇಶನ್ ರೋಡ್ ಸಮೀಪದ ಬಾಡಿಗೆ ಮನೆಗೆ ಪೊಲೀಸರು ಭೇಟಿ ನೀಡಿದ ವೇಳೆ ಆತ ಪರಾರಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ .ಈ ಕುರಿತು ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್ ಉದಯ್ ಎಸ್ ನಾಯ್ಕ ಭಟ್ಕಳ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.