ಕೆಂಡ ಹಾಯ್ದ ಸಚಿವ ಶಿವರಾಮ್ ಹೆಬ್ಬಾರ್: ವೀರಭದ್ರೇಶ್ವರ ಸನ್ನಿಧಿಯಲ್ಲಿ ಭಕ್ತರೊಂದಿಗೆ ಕೆಂಡ ಸೇವೆ
ಶಿರಸಿ: ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರ್ ಅವರು ಇಂದು ಉತ್ತರಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಭಾಶಿ ಗ್ರಾಮ ಪಂಚಾಯತ ವ್ಯಾಪ್ತಿಯ ನರೂರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಾಲಯದಲ್ಲಿ ದೇವಸ್ಥಾನದ ಆವಾರದಲ್ಲಿ ಭಕ್ತಾದಿಗಳೊಂದಿಗೆ ಕೆಂಡ ಹಾಯ್ದರು. ಭಾಶಿಯ ಶ್ರೀ ವೀರಭದ್ರೇಶ್ವರ ಹಾಗೂ ನಾಗಚೌಡೇಶ್ವರಿ ನೂತನ ಶಿಲಾ ಮೂರ್ತಿಗಳ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದಲ್ಲಿ ಪಾಲ್ಗೊಂಡದ್ದರು ಸಚಿವರು.
ಈ ವೇಳೆ ಪಕ್ಕದಲ್ಲಿ ಹರಕೆ ಸಲ್ಲಿಸುವವರಿಗಾಗಿ ಕೆಂಡ ಹಾಯುವ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಅಳುಕಿಲ್ಲದೆ ಸಚಿವರು ಕೆಂಡ ಹಾಯ್ದರು. ಹಲವಾರು ಬಾರಿ ಯುವಕರನ್ನು ನಾಚಿಸುವಂತೆ ಅವರು ತೋರುವ ಅದಮ್ಯ ಉತ್ಸಾಹ ಹಾಗೂ ಸಾಹಸ ಸಚಿವ ಶಿವರಾಮ್ ಹೆಬ್ಬಾರ್ ಅವರ ಕಾರ್ಯ ಕ್ಷೇತ್ರದ ಜನತೆಯ ಮೆಚ್ಚುಗೆಗೆ ಪಾತ್ರವಾಗಿದೆ.
ವಿಸ್ಮಯ ನ್ಯೂಸ್, ಕಾರವಾರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.