
ಹೊನ್ನಾವರ: ಕಾರ್ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡು, ಹಿಂಬದಿ ಸವಾರ ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ಕಡತೋಕಾ ಕ್ರಾಸ್ ಬಳಿ ನಡೆದಿದೆ. ಕಡತೋಕಾ ಕ್ರಾಸ್ ಬಳಿ ಚಂದಾವರ ಮಾರ್ಗದಿಂದ ಹೊನ್ನಾವರ ಕಡೆಗೆ ಸಾಗುತ್ತಿದ್ದ ಕಾರು ಎದುರಿನಿಂದ ಬಂದ ಬೈಕ್‌ಗೆ ಡಿಕ್ಕಿ ಹೊಡೆದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬೈಕ್ ಸವಾರ ಮಾಸ್ತಿ ನಾರಾಯಣ ನಾಯ್ಕ ಅವರಿಗೆ ಎರಡು ಕೈಗಳಿಗೆ ಗಾಯಗಳಾಗಿದೆ. ಆದರೆ ಬೈಕ್ ಮೇಲಿದ್ದ ಪದ್ಮಾವತಿ ಮಾಸ್ತಿ ನಾಯ್ಕ ತಲೆಗೆ ಗಂಭೀರವಾಗಿ ಗಾಯವಾಗಿತ್ತು. ಕುಮಟಾ ತಾಲೂಕು ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು.

ಆದರೆ ಮಹಿಳಸ ಅಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಮಾಸ್ತಿ ನಾಯ್ಕ ಹಾಗೂ ಮೃತಪಟ್ಟ ಪದ್ಮಾವತಿ ನಾಯ್ಕ ಇಲ್ಲಿನ ಮಲ್ಲಾಪುರದ ನಿವಾಸಿಗಳು ಎಂದು ತಿಳಿದುಬಂದಿದೆ.ಈ ಕುರಿತು ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಆರೋಪಿತ ಕಾರು ಚಾಲಕ, ಪಟ್ಟಣದ ಪ್ರಭಾತನಗರ ನಿವಾಸಿ ಶ್ರೀಪಾದ ವೆಂಕಟ್ರಮಣ ಭಟ್ ವಿರುದ್ಧ ಪ್ರಕರಣ ದಾಖಲಾಗಿದೆ.
ವಿಸ್ಮಯ ನ್ಯೂಸ್ ಕಾರವಾರ
ವಿಶೇಷ ಸೂಚನೆ: ಉತ್ತರಕನ್ನಡದ ಪ್ರಮುಖ ಸುದ್ದಿ, ವಿಶೇಷ ವರದಿ, ಸಭೆ-ಸಮಾರಂಭ ಉದ್ಯೋಗದ ಮಾಹಿತಿಯನ್ನು ನಿರಂತರವಾಗಿ ಪಡೆಯಿರಿ. ವಿಸ್ಮಯ ಟಿ.ವಿಯ 8762287698 ಈ ನಂಬರ್ ಸೇವ್ ಮಾಡಿಕೊಂಡು, ನಮ್ಮ ವಾಟ್ಸಪ್ ನಂಬರ್‌ಗೆ ಹಾಯ್ ಅಂತ ಮೆಸೇಜ್ ಮಾಡಿ ವಿಸ್ಮಯ ಟಿ.ವಿ ನ್ಯೂಸ್ ಗ್ರೂಫ್ ಮೂಲಕ ಕ್ಷಣ ಕ್ಷಣದ ಸುದ್ದಿಗಳನ್ನು, ಮೊಬೈಲ್ ನಲ್ಲಿ ನೀವಿರುವ ಸ್ಥಳದಲ್ಲೇ ನಿರಂತರವಾಗಿ ಪಡೆಯಿರಿ. ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ., ಹಾಯ್ ಅಂತ ಮೆಸೇಜ್ ಮಾಡಿ.










